ಬಿಜೆಪಿ ಸ್ಯಾಂಟ್ರೋ ರವಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸ್ತಿದೆ. ಸ್ಯಾಂಟ್ರೋ ರವಿ ನಟೋರಿಯಸ್ ಕ್ರಿಮಿನಲ್. ಹಲವಾರು ಪ್ರಕರಣಗಳು ಆತನ ಮೇಲಿವೆ. ಸ್ಯಾಂಟ್ರೋ ರವಿ ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು.
ಬಾಗಲಕೋಟೆಯಲ್ಲಿ ಇಂದು ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ.. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಎಐಸಿಸಿ ರಾಜ್ಯ ಉಸ್ತುವಾರಿ ಸುರ್ಜೆವಾಲಾ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ..
ಮುಂದಿನ ತಿಂಗಳು ಬನಶಂಕರಿ ಜಾತ್ರಾ ಮಹೋತ್ಸವ ಹಿನ್ನೆಲೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ. ಬೆಂಗಳೂರಿಂದಲೇ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಿದ್ದರಾಮಯ್ಯ.
ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡ್ತೇವೆ!
ಜನವರಿ 9ರಿಂದ ಜಿಲ್ಲಾ ಕೇಂದ್ರಗಳಿಗೆ ಹೋಗುತ್ತೇವೆ. ಎಲ್ಲರೂ ಒಟ್ಟಾಗಿ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಳಿಕ ನಾನು ಉತ್ತರ ಕರ್ನಾಟಕ ಪ್ರವಾಸ ಮಾಡ್ತೇನೆ. ಡಿಕೆಶಿ ತಂಡ ದಕ್ಷಿಣ ಕರ್ನಾಟಕ ಪ್ರವಾಸ ಮಾಡುತ್ತೆ ಅಂತಾ ಹೇಳಿದ್ದಾರೆ. tour..
ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ.
ಕುರುಬರ ಮತ ಸೆಳೆಯಲು ಮುಂದಾದ ಕಾಂಗ್ರೆಸ್ ಪಕ್ಷದ ನಾಯಕರು
ಮಂಡ್ಯದ ಕೆ.ಆರ್.ಪೇಟೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ
ಕನಕದಾಸ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗಿ
ನವೆಂಬರ್ 13ರಂದು ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಮಾಡಲಿದ್ದಾರೆ. ದೇಗುಲ, ದರ್ಗಾ ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸ್ಪರ್ಧೆ ನಿರ್ಧಾರ ಮಾಡೋಕೆ ನಾನು ಎಐಸಿಸಿ ಅಧ್ಯಕ್ಷ್ಯನಲ್ಲ. ಶ್ರೀನಿವಾಸಪುರಕ್ಕೆ ಬಂದು ಸ್ಪರ್ಧೆ ಮಾಡಲಿ ಎಂಬುದು ನನ್ನ ಬಯಕೆ ಎಂದಿದ್ದಾರೆ.
ಭಯೋತ್ಪಾದನೆ ಚಟುವಟಿಕೆಗಳಿಗೆ ಪ್ರೇರಣೆ ಕೊಟ್ಟಿದ್ದು ಕಾಂಗ್ರೆಸ್. RSS ನಿಷೇಧ ಮಾಡ್ಬೇಕು ಎಂದು ಸಿದ್ದರಾಮಯ್ಯ ಹೇಳ್ತಿದ್ದಾರೆ. ಹಿಂದೂಗಳು ವೋಟ್ ಬೇಡ ಅಂತಾ ತಾಕತ್ ಇದ್ರೆ ಹೇಳಿ ಎಂದು ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ.
ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಮಡಿಕೇರಿ ಚಲೋ ಕಾರ್ಯಕ್ರಮವನ್ನು ಕಾಂಗ್ರೆಸ್ ನಾಯಕರು ಮುಂದೂಡಿದ್ದಾರೆ. ಈ ಕುರಿತಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಅಧಿಕೃತ ಹೇಳಿಕೆ ನೀಡಿದ್ದಾರೆ.
ದೇವಸ್ಥಾನಕ್ಕೆ ಹೋಗಲು ಮಡಿ ಮೈಲಿಗೆ ಅನ್ನೋದು ಇರುತ್ತೆ, ರಂಜಾನ್ ಉಪವಾಸದಲ್ಲಿ ಊಟ ಮಾಡಲು ಹೇಳಲಿ ನೋಡೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಸಚಿವ ಆರ್. ಅಶೋಕ್ ಕಿಡಿ ಕಾರಿದ್ದಾರೆ.
ಮಡಿಕೇರಿಯನ್ನು ನಾನು ಮಾಂಸವನ್ನೇ ತಿಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂದು ನಾಟಿ ಕೋಳಿ ಊಟ ಇತ್ತು, ಅದರೂ ನಾನು ಆ ದಿನ ಅಲ್ಲಿ ನಾಟಿ ಕೋಳಿಯನ್ನು ತಿಂದೇ ಇಲ್ಲ . ನಾನು ಕೇವಲ ಅಕ್ಕಿರೊಟ್ಟಿ ಮಾತ್ರ ತಿಂದಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130 ರಿಂದ 150 ಸೀಟು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ನೂರಕ್ಕೆ ನೂರು ಬಹುಮತ ಪಡೆಯಲಿದೆ ಎಂದ ಸಿಎಂ, ಇದೇ ನನ್ನ ಕೊನೆಯ ಚುನಾವಣೆ. ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಆದ್ರೆ ಚುನಾವಣಾ ರಾಜಕೀಯದಲ್ಲಿ ಇರಲ್ಲ ಎಂದಿದ್ದಾರೆ.
ಇಂದು ನಾಡಿನಾದ್ಯಂತ ಬಕ್ರೀದ್ ಹಬ್ಬದ ಸಡಗರ ಸಂಭ್ರಮದಿಂದ ಆಚರಣೆ ಮಾಡಿದ್ರು. ಬೆಂಗಳೂರಿನಲ್ಲಿ ಮುಸ್ಲಿಮರ ಬಕ್ರೀದ್ ಹಬ್ಬದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಪ್ಪು ಬಣ್ಣದ ಟೋಪಿ ಧರಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ರು. ಇದೇ ವೇಳೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ರು. ಈ ಸಂದರ್ಭದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಸೇರಿ ಹಲವು ಮುಖಂಡರು ಸಾಥ್ ನೀಡಿದ್ರು
ಇಂದು ಧರ್ಮ ಧರ್ಮಗಳ ನಡುವೆ ಕಿತ್ತಾಟ ನಡೆಯುತಿದ್ದು ಶಾಂತಿ ಭಂಗವಾಗುತ್ತಿದೆ. ಆದರೆ ನಮಗೆ ಇವತ್ತು ಉಗ್ರ ಬಿನ್ ಲಾಡೆನ್ ಅನುಸರಿಸಿದ ಇಸ್ಲಾಂ ಧರ್ಮ ಬೇಡ. ಮಹಮ್ಮದ್ ಪೈಗಂಬರ್ ಹೇಳಿದ ಇಸ್ಲಾಂ ಧರ್ಮ ಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಪಂಚೆ ಎತ್ತಿ ಕಟ್ಟಿ ಕಿಕ್ ಬಾರಿಸುವ ಮೂಲಕ ಫುಟ್ ಬಾಲ್ ಆಟಕ್ಕೆ ಚಾಲನೆ ನೀಡಿದರು. ಸಿದ್ದರಾಮಯ್ಯ ಕಿಕ್ ಬಾರಿಸುವ ವೇಳೆ ನೆರೆದಿದ್ದ ಕಾರ್ಯಕರ್ತರು ಚಪ್ಪಾಳೆ ತಟ್ಟಿ ಹುರಿದುಂಬಿಸಿದರು. ಈ ವೇಳೆ ಸಿದ್ದರಾಮಯ್ಯ ಬಾರಿಸಿದ ಕಿಕ್ ನೇರವಾಗಿ ಗೋಲ್ ಸೇರಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.