ಆರರಿಂದ ಎಂಟನೇ ತರಗತಿಯವರೆಗೂ ಉಚಿತ ವಿದ್ಯಾಭ್ಯಾಸ ನೀಡಲು ಬಿಜಿಎಸ್ ವಿದ್ಯಾ ಸಂಸ್ಥೆ ಮುಂದಾಗಿದ್ದು, ದಾಖಲಾತಿ ಮಾಡಿಕೊಳ್ಳಲು ಸಕಲ ಸಿದ್ಧತೆ ನಡೆಸಿಕೊಂಡು ಬಂದಿದೆ. ಇದರ ಸಲುವಾಗಿ ಚಿಕ್ಕಬಳ್ಳಾಪುರ ನಗರ ಹೊರವಲಯದ ಎಸ್ ಜೆ ಸಿ ಐ ಟಿ ಕಾಲೇಜು ಕ್ಯಾಂಪಸ್ನಲ್ಲಿ ನಿರ್ಮಾಲಾನಂದ ಸ್ವಾಮಿಜೀಗಳಿಂದ ಸುದ್ದಿಗೋಷ್ಠಿ ನಡೆಸಿ, ಉಚಿತ ವಸತಿ ಶಾಲೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2022-23ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿಗಳಿಗೆ (ಆಂಗ್ಲ ಮಾಧ್ಯಮ) ಸಹ ಶಿಕ್ಷಣ ಪ್ರವೇಶ ಪಡೆಯಲು ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.