Reservation of Karnataka: ಪರಿಶಿಷ್ಟ ವರ್ಗದ ಎಲ್ಲರೂ ಸಮಾನವಾಗಿ ಅಭಿವೃದ್ಧಿಯಾಗಬೇಕು ಎಂಬ ದೃಷ್ಟಿಯಿಂದ ಒಳಮೀಸಲಾತಿ ಜಾರಿಗೆ ಒಪ್ಪಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು.
ಲೋಕಾಯುಕ್ತದಿಂದ ಸ್ಪಷ್ಟೀಕರಣ ಬರುವವರೆಗೂ ವಿಷಯ ರಿಜೆಕ್ಟ್ ಆಗುವುದಿಲ್ಲ. ರಾಜ್ಯಪಾಲರ ಬಳಿ ಇದ್ದಂತೆಯಲ್ಲವೇ? ಇದನ್ನೇ ರಾಜ್ಯಪಾಲರು ನನ್ನ ಬಳಿ ದೂರುಗಳು ಬಾಕಿ ಇಲ್ಲ ಎಂದು ಹೇಳುತ್ತಿದ್ದಾರೆ ಎಂದರು.
82 ವರ್ಷದ ಯಡಿಯೂರಪ್ಪ ಅವರ ಮೇಲೆ ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡುತ್ತಿದೆ. ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರು ಗುಡುಗಿದರು.
POCSO Case: ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದಾರೆ ಅಂತಾ ಆರೋಪಿಸಿ ಮಹಿಳೆಯೊಬ್ಬರು ಕಳೆದ ಮಾರ್ಚ್ ತಿಂಗಳಿನಲ್ಲಿ ದೂರು ನೀಡಿದ್ದರು. ಆದರೆ ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು.
- ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕುವ ನಿಟ್ಟಿನಲ್ಲಿ ಇಲಾಖೆಯು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಬೆಂಗಳೂರಿಗೆ ಅಪಕೀರ್ತಿ ತರುವಂತಹ ಮಾತುಗಳನ್ನಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಕೋಮುಗಲಭೆ ಎಬ್ಬಿಸುವ ಕ್ರಿಮಿನಲ್ಗಳಿಗೆ ಬೆಂಬಲವಾಗಿ ರಾಜ್ಯದ ಕೋಮುವಾದಿ ಕಾಂಗ್ರೆಸ್ ಸರ್ಕಾರ ನಿಂತಿರುವುದಂತು ಸ್ಪಷ್ಟ. ಕೋಲಾರದಲ್ಲಿ ಆರಂಭವಾದ ಕೋಮುದಳ್ಳುರಿ, ಶಿವಮೊಗ್ಗವನ್ನು ದಾಟಿ, ಈಗ ವಿಜಯಪುರದ ಆಲಮಟ್ಟಿಗೆ ಕಾಲಿಟ್ಟಿದೆ ಎಂದು ಬಿಜೆಪಿ ಟೀಕಿಸಿದೆ.
ಐಸಿಸ್ ಜೊತೆ ನಂಟು ಹೊಂದಿರುವ ಕಾರಣ, ರಾಜ್ಯದ ಧಾರವಾಡ, ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಕೇಂದ್ರ ತನಿಖಾ ದಳವು ಉಗ್ರರನ್ನು ಬಂಧಿಸುತ್ತಿದೆ. ಇಷ್ಟು ವರ್ಷ ಶಾಂತಿಯ ನೆಲೆಬೀಡಾಗಿದ್ದ ಕರ್ನಾಟಕ, ದಿಢೀರ್ ಅಂತಾ ಉಗ್ರರ ವಾಸಸ್ಥಾನವಾಗಿ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣವೆಂದು ಬಿಜೆಪಿ ಆರೋಪಿಸಿದೆ.
Hindu Rashtra: ಹಿಂದೂ ಧರ್ಮದ ಅಸ್ತಿತ್ವ, ಮೂಲದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಅವರ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.
ಈಗಾಗಲೇ ಕಲುಷಿತ ನೀರಿಗೆ ಸಾಕಷ್ಟು ಜೀವಗಳು ಬಲಿಯಾಗಿವೆ, ಹೀಗಿರುವಾಗಲೂ ಎಲ್ಲಾ ಇಲಾಖೆಯ ಒಳಗೂ ಮೂಗು ತೂರಿಸುವ ನೀವು ಜಿಲ್ಲಾ ಸಿಇಒಗಳಿಗೆ ಸೂಚನೆ ನೀಡಿ ಕೈ ತೊಳೆದುಕೊಂಡರೆ ಸಾಕೇ? ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಇತ್ತೀಚೆಗೆ 490 ಪಿಎಸ್ಐ ನೇಮಕಾತಿ ದೈಹಿಕ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಇದೇ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನಾಳೆ ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ನಡೆಯುತ್ತವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪ್ರಮಾಣ ವಚನ ಸ್ವೀಕರಿಸುವ ದಿನವನ್ನು ಮುಂದೂಡಬಹುದಲ್ಲವೇ..? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.