ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ಗಣೇಶ ವಿಸರ್ಜನೆ ವೇಳೆ ಝಗಮಗಿಸಿದ ಪುನೀತ್ ನೆನಪು. ಅಪ್ಪು ಹಾಡಿಗೆ ಕುಣಿದು ಕುಪ್ಪಳಿಸಿದ ಅಭಿಮಾನಿಗಳು. ಈ ವೇಳೆ ಡಿಜೆ ಲೇಸರ್ ಲೈಟ್ನಲ್ಲಿ ಮೂಡಿದ ಪುನೀತ್ ಭಾವಚಿತ್ರ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿದ್ದು ಭಾವೈಕ್ಯ ಮರೆದಿದ್ದಾರೆ.. ಸತತ 13 ವರ್ಷಗಳಿಂದ ಈ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಗ್ಯಾರೇಜ್ ಮಾಲೀಕರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ..
ಕೊಪ್ಪಳ ಜಿಲ್ಲೆಯ ಗಂಗಾವತಿಯ ದೇವಘಟ್ಟ ಸಮೀಪದ ನದಿಯಲ್ಲಿನ ನಡುಗಡ್ಡೆಯಲ್ಲಿ ಇಬ್ಬರು ಕುರಿಗಾಹಿಗಳು ಸಿಲುಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮಲೆನಾಡಿನ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ಅಧಿಕ ಪ್ರಮಾಣದಲ್ಲಿ ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ 105 ಟಿಎಂಸಿ ಸಾಮಾರ್ಥ್ಯದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಒಳಹರಿವಿನ ಪ್ರಮಾಣ ಕೂಡ ಜಾಸ್ತಿಯಾಗಿದೆ. ಇದರಿಂದ ಸದ್ಯ ಜಲಾಶಯದಿಂದ ತುಂಗಭದ್ರ ನದಿಗೆ 1 ಲಕ್ಷ 70 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
ಕೊಪ್ಪಳ ಜಿಲ್ಲಾದ್ಯಂತ ಬಕ್ರೀದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರನೆ ಮಾಡಿದ್ರು. ಕೊಪ್ಪಳದ ಈದ್ಗಾ ಮೈದಾನ ಸೇರಿದಂತೆ ವಿವಿಧೆಡೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಭಾಗಿಯಾಗಿದ್ರು. ಕೊಪ್ಪಳ, ಗಂಗಾವತಿ, ಕಾರಟಗಿ, ಕುಷ್ಟಗಿ ಭಾಗದಲ್ಲಿ ಹಬ್ಬ ಆಚರಣೆ ಮಾಡಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಅಲ್ಲದೇ ಬಕ್ರೀದ್ ಆಚರಣೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ರು
ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಟಿಕೆಟ್ಗಾಗಿ ಕಾಂಗ್ರೆಸ್ನಲ್ಲಿ ಪೈಪೋಟಿ ಶುರುವಾಗಿದೆ. ಮಾಜಿ ಶಾಸಕ ಇಕ್ಬಾಲ್ ಅನ್ಸಾರಿಗೆ ಟಿಕೆಟ್ ಸಿಗೋದು ಅನುಮಾನ ಎನ್ನಲಾಗಿದೆ. ಇದಕ್ಕೆ ಪುಷ್ಠಿ ನೀಡುವಂತೆ ಕೊಪ್ಪಳ ಕೈ ನಾಯಕರು ನವ ಸಂಕಲ್ಪ ಶಿಬಿರಕ್ಕೆ ಇಕ್ಬಾಲ್ ಅನ್ಸಾರಿ ಗೈರಾಗಿದ್ದರು. ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಗಂಗಾವತಿಯಲ್ಲಿ ನನಗೆ ಟಿಕೆಟ್ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಮಾಜಿ ಎಂಎಲ್ಸಿ ಶ್ರೀನಾಥ್ ಕೂಡಾ ರೇಸ್ನಲ್ಲಿದ್ದಾರೆ.
ಸರ್ಕಾರಿ ಆಸ್ಪತ್ರೆ ಅಂದ್ರೆ ಸಾಕು ಗಬ್ಬು ನಾರುವ ಶೌಚಾಲಯ, ಸಿಡಿಮಿಡಿಗೊಳ್ಳುವ ಸಿಬ್ಬಂದಿ ಕಣ್ಮುಂದೆ ಬರೋದು ಸಾಮಾನ್ಯ. ಆದ್ರೆ, ಇಲ್ಲೊಂದು ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆ ಈ ಮಾತಿಗೆ ಅಪವಾದ ಎನ್ನುವಂತಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ತಾಲೂಕು ಸರ್ಕಾರಿ ಆಸ್ಪತ್ರೆ ಯಾವ ಖಾಸಗಿ ಆಸ್ಪತ್ರೆಗೂ ಕಮ್ಮಿಯಿಲ್ಲ.. ಸರ್ಕಾರಿ ಆಸ್ಪತ್ರೆಗಳಿಗೆ ಈ ಆಸ್ಪತ್ರೆ ಮಾದರಿಯಾಗಿದೆ..
ನವೆಂಬರ್ 4.2021 ರಂದು ಗಂಗಾವತಿ ನಗರದ ಪಾಡಗುತ್ತಿ ಕಲ್ಯಾಣ ಮಂಟಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮದುವೆಯನ್ನು ಮಾಡಿದ ತಂದೆ, ತಾಯಿ, ವರ ಮತ್ತು ವರನ ತಂದೆ, ತಾಯಿಗಳು ಹಾಗೂ ವಿವಾಹಕ್ಕೆ ಅವಕಾಶ ನೀಡಿದ ಪಾಡಗುತ್ತಿ ಕಲ್ಯಾಣ ಮಂಟಪದ ವ್ಯವಸ್ಥಾಪಕರ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ದಿನಾಂಕ: 11.01.2022ರಂದು ಪ್ರಕರಣ ದಾಖಲಾಗಿದೆ.
ಕರ್ನಾಟಕದಲ್ಲಿ ಹಿಂದೆ 10 ಪರ್ಸೆಂಟ್ ಸರಕಾರವಿತ್ತು ಆದರೆ ಈಗ ಇಬ್ಬರು ಸೇರಿ 20 ಪರ್ಸೆಂಟ್ ಸರ್ಕಾರ ನಡೆಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರದ ವಿರುದ್ಧ ಕಿಡಿ ಕಾರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.