ರಾಜಧಾನಿಯ ಉತ್ತರ ತಾಲೂಕಿನ ದ್ವಾರಕಾ ನಗರದಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದೆ. ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಭಾರೀ ಗಾತ್ರದ ಕಬ್ಬಿಣದ ಗೇಟ್ ಕುಸಿದು ಬಿದ್ದ ಪರಿಣಾಮ, ಐದು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೂರು ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.