ಹಿರಿಯ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರು ನಿನ್ನೆ ಜಿ -23 ರ ಇತರ ಸದಸ್ಯರೊಂದಿಗೆ ವೇದಿಕೆಯನ್ನು ಹಂಚಿಕೊಂಡು ಪ್ರಧಾನಿ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಇತ್ತೀಚಿಗಷ್ಟೇ ಅವರು ಕಾಂಗ್ರೆಸ್ ಪಕ್ಷದ ನಾಯಕತ್ವ ಶೈಲಿಯನ್ನು ಅವರು ಪ್ರಶ್ನಿಸಿದ್ದರು.
ರಾಜ್ಯಸಭೆಯಲ್ಲಿ 4 ಸಂಸದರಿಗೆ ವಿದಾಯ ಹೇಳುತ್ತಾ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರನ್ನು ಹೊಗಳುತ್ತಾ ಭಾವುಕರಾದರು.
ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಅವರು ಮೂರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ಪ್ರತಿಷ್ಠೆಯ ವಿಷಯವಾಗಿಸದೆ ಹಿಂಪಡೆಯುವಂತೆ ಸರ್ಕಾರವನ್ನು ಕೇಳಿದರು.ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಲಾಗುವುದಿಲ್ಲ ಎಂದು ಘೋಷಿಸಿದ ಅವರು, ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್ಯಾಲಿಯಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವನ್ನೂ ಖಂಡಿಸಿದರು.
ಪೌರತ್ವ (ತಿದ್ದುಪಡಿ) ಕಾಯ್ದೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ ಮತ್ತು ಸಮಾಜದ ಎಲ್ಲ ವರ್ಗದವರು ಇದನ್ನು ವಿರೋಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಅವರ ಸಂಬಂಧಿಕರು ಮತ್ತು ಹಿತೈಷಿಗಳನ್ನು ಭೇಟಿ ಮಾಡಲು ಸುಪ್ರೀಂಕೋರ್ಟ್ ನಿಂದ ಅನುಮತಿ ಕೋರಿ ಮನವಿ ಸಲ್ಲಿಸಿದ್ದರು.
ಹಿಂದೂ ಅಭ್ಯರ್ಥಿಗಳು ಈಗ ತಮ್ಮನ್ನು ಪ್ರಚಾರಕ್ಕೆ ಕರೆಯುತ್ತಿರುವ ಸಂಖ್ಯೆಯಲ್ಲಿ ಹೇರಳವಾಗಿ ಕುಂಠಿತಗೊಂಡಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಗುಲಾಬ್ ನಬಿ ಅಜಾದ್ ತಿಳಿಸಿದ್ದಾರೆ. ಆಜಾದ್ ಬುಧವಾರದಂದು ಲಕ್ನೋದ ವಿಶ್ವವಿದ್ಯಾನಿಲಯದ ಸಂಸ್ಥಾಪಕ ಸರ್ ಸಯ್ಯದ್ ಅಹ್ಮದ್ ಖಾನ್ ಅವರ 201 ನೇ ಜನ್ಮದಿನೋತ್ಸವ ಸಮಾರಂಭದಲ್ಲಿ ಮಾತನಾಡುತ್ತಾ ಈ ರೀತಿ ಅಭಿಪ್ರಾಯಪಟ್ಟರು.