ಕೊರೋನಾ ಮತ್ತು ಓಮೈಕ್ರಾನ್ ಸಾಂಕ್ರಾಮಿಕ ಪ್ರಕರಣಗಳ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಈಗ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ರಾಜ್ಯದ ಎಲ್ಲಾ ವಿ.ವಿ.ಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 28 ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾನಿಲಯಗಳಿದ್ದರೂ ಸಹಿತ ಇವು ಯಾವು ಕೂಡ ಟಾಪ್ ಐದರೊಳಗೆ ಸ್ಥಾನವನ್ನು ಪಡೆಯಲು ಸಾಧ್ಯವಾಗಿಲ್ಲ. ಕೇಂದ್ರ ಮಾನವ ಅಭಿವೃದ್ದಿ ಸಂಪನ್ಮೂಲ ಸಚಿವಾಲಯ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ರಾಜ್ಯದ ಖಾಸಗಿ ವಿವಿಗಳೇ ಪಾರಮ್ಯ ಮೆರೆದಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.