ಈಗ ಪಂಚಾಯಿತಿಗೆ ಆಯ್ಕೆಯಾಗಿರುವ ಸದಸ್ಯರ ಸಹಾಯದಿಂದಲೇ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಜೊತೆಗೂಡಿ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಈ ಪ್ರಾದೇಶಿಕ ಪಕ್ಷವನ್ನು ನಮ್ಮ ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ನಾನು ಹಗಲು ರಾತ್ರಿ ಶ್ರಮಿಸುತ್ತೇನೆ- ಹೆಚ್.ಡಿ. ದೇವೇಗೌಡ
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳಿಂದ ಆಯಾ ಪಕ್ಷದ ಚಿಹ್ನೆಗಳ ಮೂಲಕ ಅಭ್ಯರ್ಥಿಗಳು ಕಣಕ್ಕಿಳಿದಿರುವುದಿಲ್ಲವಾದರೂ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿರುವ ಕಾರಣಕ್ಕೆ ರಾಜ್ಯದ ಮೂರು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಗೆ ಈ ಚುನಾವಣೆ ನಿರ್ಣಾಯಕವಾಗಿದೆ.
ಅಧಿಕಾರವನ್ನು ವಿಕೇಂದ್ರೀಕರಣಗೊಳಿಸಬೇಕೆಂಬ ಮಹದಾಶಯಗಳೊಂದಿಗೆ ಗ್ರಾಮ ಪಂಚಾಯತಿಗಳ ರಚನೆಯಾಗಿದೆ. ಹಾಗೆ ರಾಷ್ಟ್ರ ಮಟ್ಟದಲ್ಲಿ ಪಂಚಾಯತಿ ವ್ಯವಸ್ಥೆಗೆ ಕಾಯಕಲ್ಪ ನೀಡಿದವರು ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ. ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ನಜೀರ್ ಸಾಬ್.
ರಾಜ್ಯದ 113 ತಾಲೂಕು ಗಳಲ್ಲಿ 3,019 ಗ್ರಾಮಪಂಚಾಯಿತಿಗಳಿದ್ದು, ಒಟ್ಟು ಸ್ಥಾನಗಳು 48,048 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ. ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿರುವುದರಿಂದ 43,238 ಸ್ಥಾನಗಳಿಗೆ ಮಾತ್ರ ಚುನಾವಣೆ
ಗ್ರಾಮ ಪಂಚಾಯತ ಚುನಾವಣೆಯಲ್ಲಿ ಯಾವುದೇ ಪಕ್ಷಗಳು ಕಣಕ್ಕೆ ಇಳಿಯಲು ಅವಕಾಶ ಇರದಿಲ್ಲದಿರುವುದರಿಂದಾಗಿ ಇಲ್ಲಿ ಕಣಕ್ಕೆ ಇಳಿದಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗವೇ ತಾನು ನಿಗದಿಪಡಿಸಿದ ಚಿಹ್ನೆಗಳನ್ನು ವಿತರಿಸುತ್ತದೆ.
ಚುನಾವಣೆ ನಡೆಸುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುವ ಸಾಧ್ಯತೆಯಿದೆ. ಚುನಾವಣೆ ನಡೆಸಿದ್ದೇ ಆದರೆ ಕೊರೋನಾ ಸೋಂಕನ್ನು ಮನೆ ಬಾಗಿಲಿಗೆ ತಂದು ಕೂರಿಸಿದಂತಾಗುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಸರ್ಕಾರದ ಮೂಲಗಳು ತಿಳಿಸಿವೆ.