ಮೃತ ಫಲಾನುಭವಿಗಳ ಖಾತೆಯಿಂದ ಹಣ ತೆಗೆಯುವ ಪ್ರಕರಣಗಳು ಪತ್ತೆಯಾಗುತ್ತಿದ್ದಂತೆ ಇಲಾಖೆ ಎಚ್ಚೆತ್ತುಕೊಂಡಿದ್ದು, ಜನವರಿಯಿಂದಲೇ ವಸೂಲಿ ಪ್ರಕ್ರಿಯೆಗೆ ವೇಗ ನೀಡಲಾಗಿದೆ.
Gruhalakshmi Yojana: ಗೃಹಲಕ್ಷ್ಮಿ ಯೋಜನೆಯ ಹಣ ನಿಮಗಿನ್ನೂ ಬಂದಿಲ್ವಾ... ಚಿಂತೆಬಿಡಿ, ನಿಮಗೆ ಸಹಾಯ ಮಾಡಲೆಂದೇ ಸರ್ಕಾರ ಟೋಲ್-ಫ್ರೀ ಸಹಾಯವಾಣಿ ಸಂಖ್ಯೆಯನ್ನು ನೀಡಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ 24 ಕಂತುಗಳನ್ನ ಯಶಸ್ವಿಯಾಗಿ ನೀಡಲಾಗಿದೆ. ಇದೀಗ ಬಾಕಿ ಉಳಿದಿದ್ದ 2 ಕಂತಿನ ಹಣ ಬಿಡುಗಡೆ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.
Gruhalakshmi Scheme money : ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮೀ ಹಣ ಬಾಕಿ ಇದೆ. ಈ ವಿಚಾರವಾಗಿ ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಹಾಗಿದ್ರೆ, ಸಚಿವರು ಹೇಳಿದ್ದೇನು..? ಹಣ ಯಾವಾಗ ಬಿಡುಗಡೆಯಾಗುತ್ತದೆ.. ಬನ್ನಿ ನೋಡೋಣ..
Grihalakshmi Yojane: ದೀಪಾವಳಿ ಹಬ್ಬದಲ್ಲಿ ರಾಜ್ಯದ ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಗೃಹಲಕ್ಷ್ಮಿ ಹಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ʼಲೂಟಿಕೋರ ಕಾಂಗ್ರೆಸ್ ಸರ್ಕಾರ ಮಾತು ತಪ್ಪಿದೆ' ಎಂದು ಕಿಡಿಕಾರಿದೆ.
ನೋಡ್ರಿ ನಾವು ತಿಂಗಳು ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಕೊಡ್ತೀವಿ ಅಂತಾ ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು... ನಾವು ದುಡ್ಡು ಕೊಡ್ತಾ ಇರಬೇಕು. ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆಯೇ ಹಣ ಬಂದುಬಿಡುತ್ತಾ? ಎಂದು ಡಿಸಿಎಂ ಡಿ.ಕೆ.ಶಿಕುಮಾರ್ ಪ್ರಶ್ನಿಸಿದ್ದಾರೆ.
Gruhalakshmi:2024 ಡಿಸೆಂಬರ್ವರೆಗೂ 17 ತಿಂಗಳ ಹಣ ಮಹಿಳೆಯರ ಖಾತೆಗೆ ಜಮೆಯಾಗಿದೆ. ಜನವರಿ ತಿಂಗಳ ಹಣವನ್ನು ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿತ್ತು, ಇದೀಗ ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣ ಬಿಡುಗಡೆಯಾಗಬೇಕಿದೆ.
gruha lakshmi scheme: ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಗ್ಗೆ ಸಂತಸದ ಸುದ್ದಿಯೊಂದು ಹೊರ ಬಿದ್ದಿದೆ.
Gruhalakshmi Yojana: ಗೃಹಲಕ್ಷ್ಮೀ ಹಣ ಎರಡ್ಮೂರು ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು. ಸರ್ಕಾರ ಬಹುದೊಡ್ಡ ಯೋಜನೆ ಮಾಡಿದೆ. ಗೃಹಲಕ್ಷ್ಮೀ ಯೋಜನೆ ಯಾವುದೇ ಪರಿಷ್ಕರಣೆ ಇಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ
Gruhalakshmi Scheme: ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕು, ಪುರುಷರನ್ನು ಅವಲಂಬಿಸಬಾರದೆಂದು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ.
ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿ ಇದ್ದ ಬಿಜೆಪಿ ಮೈತ್ರಿ ಸರ್ಕಾರ ನಮ್ಮ ಗೃಹಲಕ್ಷ್ಮೀ ಯೋಜನೆಯನ್ನೇ ನಕಲು ಮಾಡಿ 'ಮಾಝಿ ಲಡಕಿ ಬಹಿನ್ ಯೋಜನಾ' ಎಂದು ಹೆಸರಿಟ್ಟು 1,500 ರೂಪಾಯಿಯನ್ನು ಕೊಟ್ಟಿದ್ದರು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Gruhalakshmi Yojana: ಎರಡ್ಮೂರು ತಿಂಗಳ ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣಕ್ಕೆ ಕತ್ತರಿ ಬೀಳಬಹುದೆಂಬ ಆತಂಕ ಸದ್ಯ ಫಲಾನುಭವಿಗಳಲ್ಲಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
Gruhalakshmi Yojana: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಶಾಕಿಂಗ್ ಸುದ್ದಿಯೊಂದಿದೆ. ಗೃಹಲಕ್ಷ್ಮಿ ಯೋಜನೆಯಿಂದ ಸುಮಾರು 2 ಲಕ್ಷ ಮಹಿಳೆಯರ ಹೆಸರನ್ನು ಕೈಬಿಡಲಾಗಿದೆ.
ಇದುವರೆಗೆ ಗೃಹಲಕ್ಷ್ಮಿ ಯೋಜನೆಯ 11 ತಿಂಗಳ ಮೊತ್ತ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 ಸಾವಿರ ಕೋಟಿ ರೂ ಮೊತ್ತವನ್ನು ಯೋಜನೆಗೆ ವ್ಯಯಿಸಲಾಗಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
Gruhalakshmi Scheme: ರಾಜ್ಯದ ಮಹಿಳೆಯರಿಗೆಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣವಷ್ಟೇ ಜಮಾ ಮಾಡಲಾಗಿದೆ. ಜುಲೈ ತಿಂಗಳ ಹಣವನ್ನು ಜಮಾ ಮಾಡಿಲ್ಲ. ಅಲ್ಲದೇ ಆಗಸ್ಟ್ ತಿಂಗಳ ಹಣ ಸಹ ವರ್ಗಾವಣೆ ಮಾಡುವುದಿದೆ. ಗೃಹಲಕ್ಷ್ಮಿ ಯೋಜನೆಯ ಹಣ ವಿಳಂಬವಾಗುತ್ತಿರುವುದೇಕೆ? ಅನ್ನೋ ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರ ನೀಡಿದ್ದಾರೆ.
GruhaLakshmi Scheme: ಮೊದಲು ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಚಿಕ್ಕಬಳ್ಳಾಪುರ ಇವಿಷ್ಟು ಜಿಲ್ಲೆಗಳಿಗೆ ಬಿಡುಗಡೆಯಾಗಲಿದೆ.
Gruhalakshmi scheme: MLC ದಿನೇಶ್ ಗೂಳಿಗೌಡರ ಪತ್ರಕ್ಕೆ ತಕ್ಷಣವೇ ಸ್ಪಂದಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ರೂ. ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚನೆ ನೀಡಿದ್ದಾರೆ.