Gujrat Riots 2002: ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಉದ್ದೇಶದಿಂದ ಸೆಟಲ್ವಾಡ್ ಪರ ವಕೀಲರು ನ್ಯಾಯಾಧೀಶರಿಗೆ ತಮ್ಮ ಆದೇಶವನ್ನು 30 ದಿನಗಳ ಕಾಲ ತಡೆಹಿಡಿಯುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ನ್ಯಾಯಾಧೀಶರಾದ ದೇಸಾಯಿ ಸುಮಾರು ಒಂದು ವರ್ಷದಿಂದ ಅವರು ಮಧ್ಯಂತರ ಜಾಮೀನಿನ ಮೇಲೆ ಇರುವ ಕಾರಣ ವಕೀಲರ ಮನವಿಯನ್ನು ತಿರಸ್ಕರಿಸಿದ್ದಾರೆ.
2002ರ ಗುಜರಾತ್ ಗೋಧ್ರಾ ಹತ್ಯಾಕಾಂಡ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿ ಇತರ 63 ಮಂದಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ನೀಡಿದ್ದ ಕ್ಲೀನ್ ಚಿಟ್ ಅನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಎತ್ತಿಹಿಡಿದಿದ್ದು, ಹತ್ಯೆಯಾದ ಕಾಂಗ್ರೆಸ್ ಮುಖಂಡ ಎಹ್ಸಾನ್ ಜಾಫ್ರಿ ಅವರ ಪತ್ನಿಯ ಮನವಿಯನ್ನು ವಜಾಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.