ಕೊರೊನಾ ವೈರಸ್ ಕಾರಣ ದೇಶಾದ್ಯಂತ ಘೋಷಿಸಲಾಗಿರುವ ಲಾಕ್ ಡೌನ್ ಹಿನ್ನೆಲೆ ಡಿಜಿಟಲ್ ಹಣ ಪಾವತಿಗೆ ಸಾಕಷ್ಟು ಮಹತ್ವ ಬಂದಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ತಮ್ಮ ತಮ್ಮ ಮನೆಗಳಲ್ಲಿ ಬಂಧಿಯಾಗಿರುವ ಜನರು ಮೊಬೈಲ್ ಅಪ್ಲಿಕೇಶನ್ ಆಧಾರಿತ ಹಣ ಪಾವತಿ ವೇದಿಕೆಗಳ ಸಹಾಯ ಪಡೆದು ತಮಗೆ ಬೇಕಾದ ವಸ್ತುಗಳನ್ನು ಪಡೆಯುತ್ತಿದ್ದಾರೆ. ಉದಾಹರಣೆಗೆ, ವಿದ್ಯುತ್, ನೀರಿನ ಬಿಲ್ಗಳು ಅಥವಾ ರೀಚಾರ್ಜ್ ಮಾಡಲು ಡಿಜಿಟಲ್ ಪಾವತಿ ಅಪ್ಲಿಕೇಶನ್ಗಳನ್ನು ಬಳಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೂಗಲ್ನ ಡಿಜಿಟಲ್ ಪಾವತಿ ಪ್ಲಾಟ್ಫಾರ್ಮ್ ಗೂಗಲ್ ಪೇ ತನ್ನ ಬಳಕೆದಾರರಿಗೆ ಅದ್ಭುತ ಕೊಡುಗೆಗಳನ್ನು ಹೊತ್ತುತಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.