ಜನತಾದಳ (ಜಾತ್ಯತೀತ) ಮುಖಂಡ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದೆಂಬ ವರದಿಗಳನ್ನು ಭಾನುವಾರ ತಳ್ಳಿಹಾಕಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ರಾಜ್ಯದಲ್ಲಿನ 11 ಶಾಸಕರು ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಈ ವಿಚಾರವಾಗಿ ಚರ್ಚಿಸಲು ಸಚಿವ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಎಚ್.ಡಿ.ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾದರು.
ಬಿಜೆಪಿಯೇತರ ಸರ್ಕಾರ ರಚನೆಗೆ ಪಣತೊಟ್ಟಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈಗ ಹಲವು ರಾಷ್ಟ್ರೀಯ ಪ್ರಾದೇಶಿಕ ಪಕ್ಷಗಳ ನಾಯಕರನ್ನು ಭೇಟಿ ಮಾಡಿದ ನಂತರ ಇಂದು ರಾತ್ರಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಹೆಚ್ಡಿಕೆ ಅವರನ್ನು ಭೇಟಿ ಮಾಡಿ ಮಹತ್ವದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ರೀತಿ ಸಮಸ್ಯೆ ಇಲ್ಲ. ಈಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಸಮ್ಮಿಶ್ರ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ.