ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕೂಡಲೇ ಆ ದುಷ್ಟರನ್ನು ಪತ್ತೆ ಹಚ್ಚಿ ಕಠಿಣವಾಗಿ ಶಿಕ್ಷಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು.
ʼಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ. ಗುತ್ತಿಗೆದಾರರ ₹32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ರಸ್ತೆಗೆ ಮಾತ್ರವಲ್ಲ, ಮೈಸೂರಿಗೇ ಇಡಬೇಕು ಎಂದು ಶಾಸಕರೊಬ್ಬರು ಕೇಳಿದ ಪ್ರಶ್ನೆಗೆ ಕಟುವಾಗಿ ಉತ್ತರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಮೈಸೂರಿಗೆ ಏಕೆ, ಇಡೀ ಕರ್ನಾಟಕಕ್ಕೆ ಇಟ್ಟುಬಿಡಿ ಎಂದು ಲೇವಡಿ ಮಾಡಿದರು.
ಘಟನೆ ನಡೆದಿದ್ದು 2016-2019ರಲ್ಲಿಯಂತೆ. ದೂರು ಸ್ವೀಕರಿಸುವುದು ಈಗ. ಈ ಸರಕಾರ ಯಾವಾಗ ಏನು ಬೇಕಾದರೂ ಮಾಡುತ್ತದೆ. ಸರಕಾರದಲ್ಲಿ ಅಧಿಕಾರ ವರ್ಗವನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ ಇವರು ಎನ್ನುವುದು ಗೊತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬಹುತೇಕ ಖಾಸಗೀಕರಣದ ಹೊಸ್ತಿಲಲ್ಲಿದ್ದ ಭಾರತೀಯ ರಾಷ್ಟ್ರೀಯ ಉಕ್ಕು ನಿಗಮ (RINL) ಅಥವಾ ವೈಜಾಗ್ ಸ್ಟೀಲ್ ಕಾರ್ಖಾನೆಯನ್ನು ಹೊಸ ವರ್ಷದಲ್ಲಿ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಅವಿರತ ಪ್ರಯತ್ನ ಫಲಕಾರಿಯಾಗಿದೆ.
Viswa Havyaka Sammelana: ಹವ್ಯಕ ಸಮುದಾಯದ ಯುವಕ-ಯುವತಿಯರು 21ರೊಳಗೆ ಮದುವೆಯಾಗಿ, 3ಕ್ಕೂ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಕರೆ ನೀಡಿದ್ದಾರೆ.
ಮಂಡ್ಯದಲ್ಲಿ ದಿಶಾ ಸಭೆಗೆ ಮುನ್ನ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ರಾಜ್ಯ ಸರಕಾರ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಪ್ರಕರಣ ನಿರ್ವಹಿಸಿದ ಬಗ್ಗೆ ಕಿಡಿಕಾರಿದರು.
ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಮ್ಮ ಜನ್ಮದಿನದ ನಿಮಿತ್ತ ನವದೆಹಲಿಯಲ್ಲಿರುವ ಹೌಜ್ ಕಾಜ್ ಪ್ರದೇಶದಲ್ಲಿರುವ ಶ್ರೀ ಶಿವ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ.
HD Kumaraswamy: ಅಧಿಕಾರಕ್ಕೆ ಬಂದಾಗಿನಿಂದ 17ರಿಂದ 18 ಎಸ್ ಐಟಿಗಳನ್ನು ರಚನೆ ಮಾಡಿಕೊಂಡು ರಾಜಕೀಯ ಹಗೆತನ ತೋರುತ್ತಿರುವ ವ್ಯಕ್ತಿಗಳನ್ನು ಏನೆಂದು ಕರೆಯಬೇಕು? ಒಬ್ಬ ಸಚಿವರಾಗಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಅವರು ತರಾಟೆಗೆ ತೆಗೆದುಕೊಂಡರು.
ಚುನಾವಣೆ ಎರಡು ದಿನ ಇರುವಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಹಾಕ್ತಾರೆ. ಇದನ್ನ ಚುನಾವಣಾ ಆಯೋಗ ಗಮನಿಸಬೇಕು. ಸರ್ಕಾರದ ಹಣ ಕನ್ನಡಿಗರ ತೆರಿಗೆ ಹಣವನ್ನು ಚುನಾವಣೆ ವೇಳೆ ಹಾಕ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಗುಡುಗಿದರು..
ಕೆಂಪೇಗೌಡ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ಕೇಂದ್ರ ವೈದ್ಯಕೀಯ ಮಂಡಳಿಯಿಂದ ಹೆಚ್ಚುವರಿಯಾಗಿ 100 ಯುಜಿ ಹಾಗೂ 68 ಪಿಜಿ ಸೀಟುಗಳ ಮಂಜೂರು ಮಾಡಿಸಿಕೊಡುವಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಕೇಂದ್ರದ ಆರೋಗ್ಯ ಸಚಿವ ಜೆಪಿ ನಡ್ಡಾ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಉಪಚುನಾವಣೆ ಪ್ರಚಾರದ ವೇಳೆ ಕುಮಾರಸ್ವಾಮಿ ಅವರ ಬಗ್ಗೆ ಜಮೀರ್ ಅವರು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಕೇಳಿದಾಗ, "ಅವರಿಬ್ಬರ ನಡುವೆ ಹಳೆಯ ಸ್ನೇಹ ಇದೆ. ಜಮೀರ್ ಅವರು ಕುಮಾರಸ್ವಾಮಿ ಯಾವ ಚಡ್ಡಿ ಹಾಕಿದ್ದಾರೆ ನೋಡಿದ್ದೇನೆ ಎನ್ನುತ್ತಾರೆ.
ಬಹಿರಂಗ ಪ್ರಚಾರದ ಕೊನೆಯ ಗಳಿಗೆಯಲ್ಲಿ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ನೀಡಿದ ಹೇಳಿಕೆ ಸಾಕಷ್ಟು ಸದ್ದು ಗದ್ದಲಕ್ಕೆ ಕಾರಣವಾಗುತ್ತಿದೆ. ಕುಮಾರಸ್ವಾಮಿಯವರನ್ನು ನಾನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು. ಅವರು ನನ್ನನ್ನು ಕುಳ್ಳ ಅಂತಿದ್ರು” ಎಂದು ಜಮೀರ್ ಅಹ್ಮದ್ ಖಾನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮಹಾರಾಷ್ಟ್ರದಲ್ಲಿ, ಕರ್ನಾಟಕದಲ್ಲಿ, ಗೋವಾದಲ್ಲಿ ಆಪರೇಶನ್ ಮಾಡಿ ಎಕ್ಸ್ಪರ್ಟ್ ಆಗಿರುವ ಬಿಜೆಪಿ ಚುನಾವಣೆಯ ಪಾವಿತ್ರ್ಯತೆಯನ್ನು ಕೆಡಿಸಲು ಹೊರಟಿದೆ. ಹಣದ ಹೊಳೆ ಹರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ನೆಲೆಘಟ್ಟನ್ನೇ ಅಲುಗಾಡಿಸಲು ಹೊರಟಿದೆ ಎಂದು ಚೆಲುವರಾಯಸ್ವಾಮಿ ಆರೋಪಿಸಿದ್ದಾರೆ.
Channapatna bypoll: ನಮಗೆ ರೈತರ, ಬಡ ಜನರ ಕಷ್ಟ ಸುಖಗಳ ಅರಿವಿದೆ. ಅವರ ಕಷ್ಟಕ್ಕೆ ಸ್ಪಂದಿಸುವ ಹೃದಯ ಯಾರಿಗಿರುತ್ತೋ ಅವರಿಗೆ ಮಾತೃ ಹೃದಯ ಇರುತ್ತದೆ. ಕಣ್ಣೀರಿನ ಬಗ್ಗೆ ವ್ಯಂಗ್ಯ ಮಾಡುವ ಜನರಿಗೆ ನಾನು ಇನ್ನೇನು ಹೇಳಲು ಬಯಸುವುದಿಲ್ಲ ಎಂದು ದೇವೇಗೌಡರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.