ನಾನು ಬೇಡ ಅನ್ನೋಕೆ ಯಾರು?, ಯಾರು ಬೇಕಾದರೂ ನಿಂತಿಕೊಳ್ಳಬಹುದು.
ಲೋಕಸಭಾ ಚುನಾವಣೆಗೆ ಯುಪಿ ಯಿಂದಲೂ ಬಂದು ಮಂಡ್ಯದಲ್ಲಿ ನಿಂತಿಕೊಳ್ಳಬಹುದು
ನಾನು ಹೋಗಿ ಬೀದರ್ ನಲ್ಲಿ ನಿಂತಿಕೊಳ್ಳಬಹುದು.
ಇದು ಲೋಕಸಭಾ ಚುನಾವಣೆ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು.
ಬೇಡ ಅಂತ ಹೇಳಕ್ಕಾಗಲ್ಲ, ಆದ್ರೆ ನಮ್ಮ ಜನ ಇಷ್ಟ ಪಡುವ ವ್ಯಕ್ತಿ ನಮ್ಮ ಜಿಲ್ಲೆಯವರೆಗೆ ಆಗಬೇಕು ಅನ್ನೋದು ಸಹಜ.
ರಾಜ್ಯಕ್ಕೆ ತೀವ್ರ ಬರಗಾಲ ಬಂದಿದೆ. ಕೇಂದ್ರದಿಂದ ಬರ ಪರಿಹಾರ ಕೇಳಿ 17 ಬಾರಿ ಕೇಂದ್ರಕ್ಕೆ ಬರೆದೆವು. ಇದರಲ್ಲಿ ಒಂದು ಪತ್ರಕ್ಕೆ ಮಾತ್ರ, "ನಿಮ್ಮ ಪತ್ರ ತಲುಪಿದೆ" ಎನ್ನುವ ಉತ್ತರ ಕೇಂದ್ರದಿಂದ ಬಂತು. ಆದರೆ ಉಳಿದ 16 ಪತ್ರಗಳಿಗೆ ಉತ್ತರವೂ ಬರಲಿಲ್ಲ. ಕೇಂದ್ರದ ಅನುದಾನ ರಾಜ್ಯಕ್ಕೆ ಇವತ್ತಿನವರೆಗೂ ಒಂದು ಪೈಸೆಯೂ ಬಂದಿಲ್ಲ. ಇದು ನಿಯಮಬದ್ದವಾಗಿ ರಾಜ್ಯದ ಹಕ್ಕು. ರಾಜ್ಯದ ಪಾಲು. ಇದನ್ನೂ ಕೇಂದ್ರ ಕೊಡುತ್ತಿಲ್ಲ. ನಮ್ಮ ಪಾಲನ್ನು, ರಾಜ್ಯದ ಪಾಲನ್ನು ಕೇಳುವುದು ತಪ್ಪಾ? ಇದು ಸಂಘರ್ಷ ಹೇಗಾಗುತ್ತದೆ ಎಂದು ಪ್ರಶ್ನೆಸಿದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.ಅವರು 2024-25 ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕೇಂದ್ರ ಸರಕಾರ ಅಮೃತಕಾಲ ಅಂದರೆ ಸಿದ್ದರಾಮಯ್ಯ ಅವರು ವಿನಾಶಕಾಲ ಎಂದು ಹೇಳಿದರು. ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರಕಾರದಿಂದ ನಮಗೆ ಅನ್ಯಾಯ ಆಗಿಲ್ಲ. ಕೇವಲ ರಾಜಕೀಯ ಕಾರಣಕ್ಕೆ ಮುಖ್ಯಮಂತ್ರಿಗಳು ಕೇಂದ್ರ ಸರಕಾರದ ಜತೆ ಸಂಘರ್ಷಕ್ಕೆ ಇಳಿದಿದ್ದಾರೆಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆರೋಪಿಸಿದರು.
ಒಂದು ಕೈಯ್ಯಲ್ಲಿ ಗ್ಯಾರಂಟಿಗಳನ್ನು ಕೊಟ್ಟು ಜನರನ್ನು ಬಡತನದಿಂದ ಮಧ್ಯಮ ವರ್ಗಕ್ಕೆ ತಂದಿದ್ದೇವೆ ಎನ್ನುವ ರಾಜ್ಯ ಸರಕಾರ, ಹಾಗೆ ಕೊಟ್ಟು ಹತ್ತು ಕೈಗಳಲ್ಲಿ ಹೀಗೆ ಆ ಹಣವನ್ನು ಕಿತ್ತುಕೊಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು.ಇದು ರಾಜ್ಯವನ್ನು ವಿನಾಶದ ಅಂಚಿಗೆ ತಳ್ಳುತ್ತಿರುವ ʼಸಿದ್ದನಾಮಿಕ್ಸ್ʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ ಕುಮಾರಸ್ವಾಮಿ ಅವರು.
ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದು, ಅವರಿಗೆ ಆತ್ಮಸಾಕ್ಷಿಯ ಮತಗಳು ಬೀಳಲಿವೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಡ್ಡಮತದಾನದ ಸೂಚನೆ ನೀಡಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು.
BJP ಮತ್ತು JDS ನ ಬೆಂಬಲಿಗರು ಮತ್ತು ಮತದಾರರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
HD Kumaraswamy: 77 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 ಜನರಿಗೆ ಸಂಪುಟ ಭಾಗ್ಯ ಕರುಣಿಸಲಾಗಿದೆ. ರಾಜ್ಯದ ಆಡಳಿತಾತ್ಮಕ ಇತಿಹಾಸದಲ್ಲಿಯೂ ಇಷ್ಟು ಬೇಕಾಬಿಟ್ಟಿಯಾಗಿ ಅಧಿಕಾರ ಹಂಚಿಕೆ ಮಾಡಿ ಖಜಾನೆಗೆ ನಷ್ಟ ಉಂಟು ಮಾಡಲಾಗಿದೆ ಎಂದು ಅವರು ದೂರಿದರು.
ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
HD Kumaraswamy: ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರತ್ಯೇಕ ರಾಷ್ಟ್ರದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಅವರು ನೀಡಿರುವ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಚುನಾವಣೆ ವೇಳೆ 3 ಸಾವಿರ, 5 ಸಾವಿರ ಬೆಲೆಯ ಉಡುಗೊರೆ ಕೊಡುತ್ತೇವೆ ಎಂದು ಹೇಳಿ ಗಿಫ್ಟ್ ಕೂಪನ್ ಗಳನ್ನು ಹಂಚಿ ಚುನಾವಣೆಯಲ್ಲಿ ಗೆದ್ದರು. ಅಮಾಯಕ ಹೆಣ್ಣುಮಕ್ಕಳನ್ನು ನಂಬಿಸಿ ಮೋಸ ಮಾಡಿದರು ಎಂದು ರಾಜ್ಯ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದರು.
ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದರು.
ಕುಮಾರಸ್ವಾಮಿ ಅವರು ಬಂದು ಮಂಡ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಹೇಳಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; 'ಅತಿ ವಿನಯಂ ದೂರ್ತ ಲಕ್ಷಣಂ' ಎಂಬ ಮನೋಭಾವನೆಯ ವ್ಯಕ್ತಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧನೆ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮದೇವರ ಪ್ರಾಣಪ್ರತಿಷ್ಠೆ ನಂತರ ಕ್ಷೇತ್ರ ಹಂಚಿಕೆ ನಿರ್ಧಾರ ಕೈಗೊಳ್ಳಲಾಗುವುದು. ಬಿಜೆಪಿ-ಜೆಡಿಎಸ್ ರಾಜ್ಯ ನಾಯಕರ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಣಯ ತೆಗೆದುಕೊಳ್ಳುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.