Health department of Karnataka: ತಮಿಳುನಾಡು, ರಾಜಸ್ತಾನ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಮಾದರಿಯನ್ನ ಅಧ್ಯಯನ ಮಾಡಿ ವರದಿ ನೀಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು. ಸಿಎಂ ಸೂಚನೆ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದರು. ಇದೀಗ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ನಾಲ್ವರು ಅಧಿಕಾರಿಗಳನ್ನು ಅಧ್ಯಯನಕ್ಕೆ ನೇಮಿಸಿದ್ದಾರೆ.
ಮುಂದಿನ ವರ್ಷದೊಳಗೆ ರಾಜ್ಯದ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು. ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ ಕ್ಷೇತ್ರದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಇಂದು ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.
Unique Health Card:ಎಲ್ಲರಿಗೂ ಆಧಾರ್ ಕಾರ್ಡ್ ರೀತಿಯಲ್ಲಿಯೇ ಯುನಿಕ್ ಹೆಲ್ತ್ ಕಾರ್ಡ್ ಸಿಗಲಿದೆ. ಯಾವುದೇ ಓರ್ವ ರೋಗಿಗೆ ಆಯುಷ್ಮಾನ್ ಭಾರತ್ ಯೋಜನೆಯ ಅಡಿ ಚಿಕಿತ್ಸಾ ವೆಚ್ಚದ ಲಾಭ ಸಿಗಲಿದೆಯೇ ಅಥವಾ ಇಲ್ಲವೇ ಎಂಬುದು ಈ ಯುನಿಕ್ ಕಾರ್ಡ್ ನಿಂದ ಪತ್ತೆಹಚ್ಚಬಹುದು.
ದೇಶದ ಪ್ರತಿಯೊಬ್ಬ ನಾಗರಿಕರ ಆರೋಗ್ಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಇರಿಸುವ ಉದ್ದೇಶದಿಂದ ಸರ್ಕಾರ ಇದನ್ನು ಸಿದ್ಧಪಡಿಸುತ್ತಿದೆ. ನಿಮ್ಮ ಅನನ್ಯ ಐಡಿ ಮೂಲಕ ವೈದ್ಯರಿಗೆ ಎಲ್ಲಿಂದಲಾದರೂ ಕುಳಿತು ಎಲ್ಲಾ ವೈದ್ಯಕೀಯ ದಾಖಲೆಗಳನ್ನು ನೋಡಲು ಸಾಧ್ಯವಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.