ಕರೋನಾ ವೈರಸ್ ಪ್ರಕೋಪದ ನಡುವೆ ಇದೀಗ ದೇಶದ ಉಷ್ಣಾಂಶ ಕೂಡ ಹೆಚ್ಚುತ್ತಿದೆ. ಭಾನುವಾರ, ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ಉಷ್ಣಾಂಶ 45 ರಿಂದ 45.6 ಡಿಗ್ರಿ ಸೆಲ್ಸಿಯಸ್ ತಲುಪಿದೆ.
ಉತ್ತರ ಭಾರತದ ಹಲವಾರು ಭಾಗಗಳಲ್ಲಿ ತಾಪಮಾನವು 45 ಡಿಗ್ರಿ ಸೆಲ್ಸಿಯಸ್ ಅನ್ನು ಮೀರಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ರಾಜಸ್ಥಾನಗಳಿಗೆ ಮುಂದಿನ ಎರಡು ದಿನಗಳವರೆಗೆ ರೆಡ್ ಅಲರ್ಟ್ ಘೋಷಿಸಿದೆ.