ಅಥಣಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಯಲ್ಲಮ್ಮವಾಡಿ ಕೆರೆ ತುಂಬಿ ದೇವಸ್ಥಾನ ಮುಂಭಾಗದ ಹಳ್ಳದಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು, ದೇವಸ್ಥಾನ ಸುತ್ತಲೂ ನೀರು ಆವರಿಸಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದಿನನಿತ್ಯ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಾರೆ. ಸದ್ಯ ದೇವಸ್ಥಾನ ಜಲ ದಿಗ್ಬಂಧನಗೊಂಡ ಹಿನ್ನೆಲೆ ಭಕ್ತರು ಹಳ್ಳ ದಾಟಿಕೊಂಡು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ.
ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದಿದ್ದು, ಹಳ್ಳ-ಕೊಳ್ಳಗಳು ಉಕ್ಕಿಹರಿಯುತ್ತಿವೆ. ಮಣ್ಣೂರು-ಇಂಡಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು ಸಂಪರ್ಕ ಕಡಿತವಾಗಿದೆ. ಮನೆಯಲ್ಲಿನ ದಿನಸಿ, ಅಗತ್ಯ ವಸ್ತುಗಳು ನೀರು ಪಾಲಾಗಿದೆ..
ಕಲ್ಪತರು ನಾಡು ತುಮಕೂರಿನಲ್ಲಿ ವರುಣನ ಅಬ್ಬರ ಕಡಿಮೆ ಆಗ್ತಾನೇ ಇಲ್ಲ. ಜಿಲ್ಲೆಯ ತಿಪಟೂರಿನಲ್ಲಿ ಸುರಿದ ಭಾರಿ ಮಳೆಗೆ ರಸ್ತೆಗಳು ತುಂಬಿ ಹರಿದಿದೆ. ಕಳೆದ ಕೆಲವು ದಿನಗಳಿಂದ ಮಾಯವಾಗಿದ್ದ ಮಳೆರಾಯ ತುಮಕೂರಿನ ತಿಪಟೂರಿನಲ್ಲಿ ಅಬ್ಬರಿಸಿ ಬೊಬ್ಬರಿದಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.