ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟೆ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ ಮತ್ತು ಬಳ್ಳಾರಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ರಾಯಚೂರಿನಲ್ಲೂ ಪ್ರವಾಹ ಪರಿಸ್ಥಿತಿ ಶುರುವಾಗಿದೆ. ಜಿಲ್ಲೆಯಲ್ಲಿ ಒಂದೊಂದೇ ಸೇತುವೆಗಳು ಮುಳುಗಳು ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ಲಿಂಗಸುಗೂರಿನ ಹಂಚಿನಾಳದಲ್ಲಿ ಆರೋಗ್ಯ ಇಲಾಖೆ ಗ್ರಾಮದಲ್ಲಿನ ಗರ್ಭಿಣಿಯರನ್ನು ಸ್ಥಳಾಂತ ರಿಸುತ್ತಿದೆ
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲ್ಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಜು.12ರಂದು ಈ ತಾಲ್ಲೂಕಿನ ಶಾಲೆಗಳಿಗೆ ಮಾತ್ರ ಅನ್ವಯವಾಗುವಂತೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಮಳೆಯ ಹೊಡೆತಕ್ಕೆ ಸಿಲುಕಿದ ಕರುನಾಡಿನ ಸೇತುವೆಗಳು ಜಲಾವೃತವಾಗಿದೆ.. ಸಂಚಾರ ಅಸ್ತವ್ಯಸ್ತವಾಗಿದೆ.. ನಿರಂತರ ಮಳೆಯಿಂದ ಜನರು ಹೈರಾಣರಾಗಿದ್ದಾರೆ.. ಈ ಕುರಿತದ ಒಂದು ಸಂಪೂರ್ಣ ವರದಿ ಇಲ್ಲಿದೆ ನೋಡಿ..
ಬೆಳಗಾವಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಕತ್ರಿದಡ್ಡಿ, ದಿಂಡಲಕೊಪ್ಪ, ನಿಚ್ಚಣಕಿ ಗ್ರಾಮಗಳ ಮನೆಗಳಿಗೆ ಭಾರೀ ಹಾನಿ ಉಂಟಾಗಿದೆ. ಸ್ಥಳಕ್ಕೆ ಖಾನಾಪುರ ತಾಲೂಕು ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ನಿರಂತರ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಜಲಪ್ರಳಯವೇ ಸೃಷ್ಟಿ ಆಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿನ ಮನೆಗಳು ಸಂಪೂರ್ಣ ಜಲಾವೃತವಾಗಿವೆ.
ನಿರಂತರ ಮಳೆಗೆ ಅನ್ನದಾತರು ಅಕ್ಷರಶಃ ಕಂಗಾಲಾಗಿ ಮೊಳಕೆ ಒಡೆಯುತ್ತಿದ್ದ ಸಸಿಗಳೆಲ್ಲವೂ ಜಲಾವೃತ ಸಸಿಗಳೆಲ್ಲವೂ ಜಲಾವೃತವಾಗಿದ್ದರಿಂದ ರೈತರಿಗೆ ಭಾರಿ ನಷ್ಟ ಔರಾದ್ ತಾಲೂಕಿನ ಜಂಬಗಿ ಗ್ರಾಮದ ರೈತ ಕಂಗಾಲು
ದಕ್ಷಿಣ ಕನ್ನಡದ ಮುಲ್ಕಿ, ಮೂಡಬಿದಿರೆಯಲ್ಲಿ ಮಳೆ ಆರ್ಭಟ ಜೋರಾಗಿದೆ. ಉಡುಪಿ, ಕಾರ್ಕಳ, ಕೋಟಾ, ಸಿದ್ದಾಪುರದಲ್ಲೂ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಇನ್ನೂ 2 ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ.
ಬೆಳಗಾವಿ ಜಿಲ್ಲೆ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು, ಇಲ್ಲಿನ ಗೋಕಾಕ್ ಫಾಲ್ಸ್ ತುಂಬಿ ಹರಿಯುತ್ತಿದೆ. ಭಾರತದ ನಯಾಗರ ಜಲಪಾತ ಎಂದೇ ಖ್ಯಾತಿ ಪಡೆದ ಗೋಕಾಕ ಫಾಲ್ಸ್ ನೋಡಲು ಜನಸಾಗರವೇ ಹರಿದುಬರುತ್ತಿದೆ. ಈ ನಯನ ಮನೋಹರ ದೃಶ್ಯದ ಕೆಲವೊಂದು ಫೋಟೋಗಳನ್ನು ಇಲ್ಲಿ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.