ಮಲಯಾಳ ಚಿತ್ರರಂಗದಲ್ಲಿನ ಲೈಂಗಿಕ ದೌರ್ಜನ್ಯ ಕುರಿತು ರಚಿಸಲಾಗಿದ್ದ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಕೇರಳದಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ದೌರ್ಜನ್ಯಗಳು ನಡೆದಿವೆ. ಈ ಕುರಿತಂತೆ ಸಮಿತಿ ರಚಿಸುವಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ನೇತೃತ್ವದಲ್ಲಿ ನಟ ಸುದೀಪ್, ರಮ್ಯಾ ಸೇರಿದಂತೆ 153 ಮಂದಿ ಸಹಿ ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.
ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಸ್ಥಿತಿಗತಿ ಅಧ್ಯಯನಕ್ಕಾಗಿ ರಚನೆಗೊಂಡಿದ್ದ ಹೇಮಾ ಸಮಿತಿ' ರೀತಿಯಲ್ಲಿಯೇ ಕನ್ನಡ ಚಿತ್ರರಂಗಕ್ಕೂ ಒಂದು ಸಮಿತಿಯ ಅಗತ್ಯವಿದೆ ಎಂದು ನಟಿ ಶ್ರುತಿ ಹರಿಹರನ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.