ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಅಧಿಕ ಮಾಡುವ ನಿಟ್ಟಿನಲ್ಲಿ ಮತ್ತು ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲ ಪಡಿಸಲು, ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗಳನ್ನು ಅನುಷ್ಟಾನ ಮಾಡಲು ಸರ್ಕಾರದ ಆದೇಶವಾಗಿದ್ದು, ಹೈಟೆಕ್ ಹಾರ್ವೆಸ್ಟರ್ ಹಬ್ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಕೃಷಿ ಇಲಾಖೆ ವತಿಯಿಂದ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಉಪ ಕೃಷಿ ನಿರ್ದೇಶಕ ಡಾ.ಎನ್.ಕೆಂಗೇಗೌಡ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.