ಈ ವಾರವೇ ಆದೇಶ ಹೊರಬೀಳುವ ಸಾಧ್ಯತೆ. ತನಿಖೆಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ. ಇದನ್ನ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ನಾಲ್ಕು ದಿನ ಈ ಅರ್ಜಿಯ ವಿಚಾರಣೆ ನಡೆದಿದ್ದು, ಬಹುತೇಕ ಅಂತ್ಯವಾಗಿದೆ. ಇದೀಗ ಇಂದು ಮತ್ತೆ ಹೈಕೋರ್ಟ್ನಲ್ಲಿ ವಿಚಾರಣೆಗೆ ಬರುತ್ತಿದ್ದುಸಿಎಂ ಆತಂಕ ಹೆಚ್ಚಿಸಿದೆ.
ಮುರುಘಾ ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತವನ್ನು ನ್ಯಾಯಾಧೀಶರು ಪೀಠಾಧಿಪತಿಗೆ ಹಸ್ತಾಂತರಿಸಿದ್ದು ಮಠದ ಸದ್ಭಕ್ತರು ಸಹಕರಿಸಬೇಕು ಎಂದು ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷರೂ ಆಗಿರುವ ಶಿವಮೂರ್ತಿ ಶರಣರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ.
ಅರ್ಜಿದಾರರು ದುರುದ್ದೇಶದಿಂದ ಪ್ರತಿವಾದಿಗಳ ಮೇಲೆ ಒತ್ತಡ ತರಲು ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ನ್ಯಾಯಾಲಯದ ಸಮಯವನ್ನು ಹಾಳು ಮಾಡಿದ್ದಾರೆಂದು ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿಲಾಗುತ್ತಿದೆ ಎಂದು ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಅಲ್ಲದೆ ದಂಡದ ಮೊತ್ತವನ್ನು 1 ತಿಂಗಳ ಒಳಗಾಗಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸುವಂತೆ ಸೂಚಿಸಲಾಗಿದೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮೆಟ್ರೋ ಸಿಬ್ಬಂದಿಗಳು ಇಂದು ಮಧ್ಯಾಹ್ನದ ಬಳಿಕ ಮುಷ್ಕರ ಕೈಗೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ಮಧ್ಯಾಹ್ನದವರೆಗೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.