ಬೆಂಗಳೂರು: ಏಪ್ರಿಲ್ 22 ರಿಂದ ಮೇ 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
10 ನೇ ತರಗತಿ ಮಾದರಿಯಲ್ಲೇ ದ್ವಿತೀಯ ಪಿಯು ಪರೀಕ್ಷೆಯನ್ನು ನಡೆಸಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ಪರೀಕ್ಷೆ ವೇಳೆ ಸಮವಸ್ತ್ರ ಇರುವ ಕಾಲೇಜುಗಳಲ್ಲಿ ಸಮವಸ್ತ್ರ ಪಾಲನೆ ಮಾಡುವುದು ಕಡ್ಡಾಯವಾಗಿದೆ.
ಹಿಜಾಬ್ ವಿವಾದದ ಕುರಿತ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕ ಸದಸ್ಯ ಪೀಠವು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.