ಹಿಜಾಬ್ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಪೀಠ ಭಿನ್ನ ತೀರ್ಪು ನೀಡಿದೆ. ಈ ಸಂಬಂಧ ಮುಂದಿನ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಿದೆ. ಮುಂದೆ ವಿಸ್ತ್ರೃತ ಪೀಠ ರಚನೆ ಮಾಡಲಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್ ತೀರ್ಪಿನಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದ್ದಾರೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸರ್ವೋಚ್ಚ ನ್ಯಾಯಾಲಯದಿಂದ ಮಹತ್ವದ ತೀರ್ಪು ಪ್ರಕಟವಾಗಲಿದೆ. ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿರುವ ಸುಪ್ರೀಂಕೋರ್ಟ್ - ಇಡೀ ದೇಶದ ಜನರ ಚಿತ್ತ ಸುಪ್ರೀಂ ಕೋರ್ಟ್ನನತ್ತ..
ಹಿಜಾಬ್ ಧರಿಸಿ ಸರ್ಕಾರಿ ನಿಯಮಾವಳಿಯನ್ನು ಉಲ್ಲಂಘಿಸಿ ತರಗತಿಗೆ ಪ್ರವೇಶಿಸುತ್ತಿದ್ದ 24 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿತ್ತು. ಇದಕ್ಕೂ ಮೊದಲು 6 ಜನ ವಿದ್ಯಾರ್ಥಿನಿಯರು ಅಮಾನತು ಆಗಿದ್ದರು, ಅವರು ಇಂದು ಕಾಲೇಜಿಗೆ ಹಾಜರಾಗಿದ್ದಾರೆ.
ಮಂಗಳೂರಿನಲ್ಲಿ ಹಿಜಾಬ್ ಗದ್ದಲ ವಿಚಾರವಾಗಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೇಶದ ಸಂವಿಧಾನ, ಕಾನೂನು, ಸುಪ್ರೀಂ ಕೋರ್ಟ್ ತೀರ್ಪು ಇವುಗಳಿಗೆ ಗೌರವ ಇಲ್ಲಾಂದ್ರೆ. ಅವರ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಹಿಜಾಬ್ ಧರಿಸುವ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಬೇಕು. ಶಿಕ್ಷಣ ಪಡೆಯಬೇಕಾದ್ರೆ ದೇಶದ ಸಂವಿಧಾನ ಕೋರ್ಟ್ ಏನು ಹೇಳುತ್ತೆ ಹಾಗೆ ನಡೆದುಕೊಳ್ಳಬೇಕು ಎಂದರು.
ಹಿಜಾಬ್ ವಿವಾದದ ಹಿಂದೆ ದೊಡ್ಡ ಕೈವಾಡವಿದೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಬೆಳಗ್ಗೆ ಹಿಜಾಬ್ ತೆಗೆದು ಹಾಲ್ ಟಿಕೆಟ್ ಪಡೆದಿದ್ದಾರೆ. ನಂತರ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯರು ಹೈಡ್ರಾಮ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
Hijab Row: ಕರ್ನಾಟಕದಲ್ಲಿ ಆರಂಭವಾದ ಹಿಜಾಬ್ ವಿವಾದದಲ್ಲಿ ದೇಶದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್ ವೈ ಖುರೇಷಿ ಕೂಡ ಧುಮುಕಿದ್ದಾರೆ. ಹಿಜಾಬ್ ಪ್ರಕರಣದ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ನ ಮೇಲೆ ಅವರು ಅಸಭ್ಯ ಟೀಕೆಗಳನ್ನು ಮಾಡಿದ್ದು, ಬಿಜೆಪಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.
ಹಿಜಾಬ್ ವಿವಾದ ಆಗಲು ಬಿಜೆಪಿಯೇ ಕಾರಣ. ಮುಸ್ಲಿಂ ಹೆಣ್ಣು ಮಕ್ಕಳು ಒಂದು ದುಪ್ಪಟ್ಟ ತಲೆ ಹಾಕಿ ಕೊಳ್ಳುತ್ತೇನೆ ಎಂದರೆ ಅದರಲ್ಲಿ ತಪ್ಪೇನಿದೆ? ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Karnataka Hijab Row - ಹಿಜಾಬ್ ವಿವಾದದಲ್ಲಿ ತೀರ್ಪು ಪ್ರಕಟಿಸಿದ ಮೂವರು ನ್ಯಾಯಾಧೀಶರಿಗೆ ಜೀವ ಬೆದರಿಕೆ ಬಂದ ಹಿನ್ನೆಲೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಲಂಕುಷ ತನಿಖೆಗೆ ಆದೇಶಿಸಿದ್ದಾರೆ.
ಹಿಜಾಬ್, ಕೇಸರಿ ಶಾಲು ಗಲಾಟೆಯಿಂದ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆ, ಕಂಗೆಟ್ಟಿರುವ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸೋಮವಾರ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದೆ.ಕಾಕತಾಳೀಯ ಎಂಬಂತೆ ಇಂದು ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.
Hijab Verdict: ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಸಮಾಜದ ಮುಖಂಡರು ತೀರ್ಮಾನ ತೆಗೆದುಕೊಳ್ತಾರೆ ಎಂದು ಎಂಎಲ್ ಸಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
Karnataka Hijab Controversy - ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ವಿವಿಧ ಅರ್ಜಿಗಳ ವಿಚಾರಣೆ ಸಂಬಂಧಿಸಿದಂತೆ ತನ್ನ ತೀರ್ಪನ್ನು ರಾಜ್ಯ ಹೈಕೋರ್ಟ್ (Karnataka High Court) ಶುಕ್ರವಾರ ಕಾಯ್ದಿರಿಸಿದೆ.
ವಿದ್ಯಾರ್ಥಿನಿಯರ ಹಿಜಾಬ್ ಪ್ರಶ್ನೆ ಬಳಿಕ ಟರ್ಬನ್ ಧರಿಸುತ್ತಿದ್ದ ಕಾಲೇಜು ಯೂನಿಯನ್ ಅಧ್ಯಕ್ಷೆಯನ್ನು ಕರೆದು ಟರ್ಬನ್ ತೆಗೆಯಲು ಒತ್ತಾಯಿಸಿದ ಘಟನೆ ನಗರದ ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ನಡೆದಿದೆ.
ಕುವೈತ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತರೂರ್ಗೆ ಪ್ರತಿಕ್ರಿಯಿಸಿದ್ದು, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಂತಹ ಭಾರತ ವಿರೋಧಿ ಅಂಶಗಳನ್ನು ಪ್ರೋತ್ಸಾಹಿಸಬಾರದು ಎಂದು ರಾಯಭಾರ ಕಚೇರಿ ತನ್ನ ಟ್ವೀಟ್ ನಲ್ಲಿ ತಿಳಿಸಿದೆ.
Karnatak Hijab Congroversy - ಹಿಜಾಬ್ ವಿವಾದದ ಕುರಿತು ರಾಜ್ಯ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ, ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಹೇಳಿದ್ದಾರೆ. ಫೆಬ್ರವರಿ 14 ರಿಂದ ಪೂರ್ಣ ಪೀಠವು ಈ ವಿಷಯವನ್ನು ನಿರಂತರವಾಗಿ ಆಲಿಸುತ್ತಿದೆ ಎಂಬುದು ಇಲ್ಲಿ ಗಮನಾರ್ಹ.
Kanranataka Hijab Controversy - ಕರ್ನಾಟಕದ ಅಲ್ಪಸಂಖ್ಯಾತರ ಶಾಲೆಗಳಲ್ಲೂ (Karnataka Minority Schools) ಹಿಜಾಬ್ ಅನ್ನು ನಿಷೇಧಿಸಲಾಗಿದೆ. ಈ ಸಂಬಂಧ ಬೊಮ್ಮಾಯಿ ಸರ್ಕಾರ (Bommai Government) ಗುರುವಾರ ಆದೇಶ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.