ಹಿಜಾಬ್ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಪೀಠ ಭಿನ್ನ ತೀರ್ಪು ನೀಡಿದೆ. ಈ ಸಂಬಂಧ ಮುಂದಿನ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಿದೆ. ಮುಂದೆ ವಿಸ್ತ್ರೃತ ಪೀಠ ರಚನೆ ಮಾಡಲಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್ ತೀರ್ಪಿನಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದ್ದಾರೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸರ್ವೋಚ್ಚ ನ್ಯಾಯಾಲಯದಿಂದ ಮಹತ್ವದ ತೀರ್ಪು ಪ್ರಕಟವಾಗಲಿದೆ. ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿರುವ ಸುಪ್ರೀಂಕೋರ್ಟ್ - ಇಡೀ ದೇಶದ ಜನರ ಚಿತ್ತ ಸುಪ್ರೀಂ ಕೋರ್ಟ್ನನತ್ತ..
ರಾಜ್ಯ ಹೈಕೋರ್ಟ್ (High Court) ಹಿಜಾಬ್ ಕುರಿತು ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಜೊತೆಗೆ ರಾಜ್ಯ ಬಂದ್ ಕರೆ ಕೊಟ್ಟ ಕೆಲ ಮುಸ್ಲಿಂ ಸಂಘಟನೆಗಳ ನಡೆಯ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಚರ್ಚೆ ನಡೆಸಲಾಯಿತು.
ಹಿಜಾಬ್ ವಿವಾದದ ಕುರಿತಂತೆ ರಾಜ್ಯ ಹೈಕೋರ್ಟ್ ತೀರ್ಪಿನಿಂದಾಗಿ ಅಸಮಾಧಾನಗೊಂಡಿರುವ ಸಮುದಾಯದ ಮುಖಂಡರು ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಆದರೆ, ಅವರು ನ್ಯಾಯಾಲಯದ ತೀರ್ಪು ಧಿಕ್ಕರಿಸಿ ಈ ಪ್ರತಿಭಟನೆ ಮಾಡುವುದಾಗಿ ಹೇಳಿಲ್ಲ ಎಂಬುದನ್ನು ಸಿದ್ದರಾಮಯ್ಯ ಉಲ್ಲೇಖಿಸಿದರು.
ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ವ್ಯಾಪಾರ ವಹಿವಾಟು ನಡೆಸದೆ ಹಾಗೂ ಯಾರ ಮೇಲೂ ಯಾವ ರೀತಿಯ ಒತ್ತಾಯವನ್ನೂ ಹೇರದೆ ಈ ಬಂದ್ಗೆ ಬೆಂಬಲ ಸೂಚಿಸುವಂತೆ ಧರ್ಮಗುರುಗಳ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಘೋಷಣೆ ಮಾಡಿದ್ದಾರೆ.
ಧರ್ಮ ಮತ್ತು ಅದರ ನಂಬಿಕೆಗಳಿಗಿಂತ ಸಂವಿಧಾನವು ಸರ್ವೋಚ್ಚವಾಗಿದೆ ಎಂದು ಹೈಕೋರ್ಟ್ನ ತೀರ್ಪು ಸಾಬೀತುಪಡಿಸಿದೆ. ನ್ಯಾಯಾಲಯದ ತೀರ್ಪನ್ನು ಗೌರವಿಸುವಂತೆ ಮತ್ತು ಇನ್ನು ಮುಂದೆ ಈ ವಿಷಯವನ್ನು ಅನಗತ್ಯವಾಗಿ ವಿವಾದ ಮಾಡದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿನಂತಿಸಿದರು.
ಹಿಜಾಬ್, ಕೇಸರಿ ಶಾಲು ಗಲಾಟೆಯಿಂದ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆ, ಕಂಗೆಟ್ಟಿರುವ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸೋಮವಾರ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದೆ.ಕಾಕತಾಳೀಯ ಎಂಬಂತೆ ಇಂದು ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.
ನಮಗೆ ನ್ಯಾಯಾಲಯದ ಮೇಲೆ ಬಹಳ ನಿರೀಕ್ಷೆ ಇತ್ತು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಬಹಳ ಭರವಸೆ ಇತ್ತು. ಆದರೆ ಹೈಕೋರ್ಟ್ ನಲ್ಲಿ ತೀರ್ಪು ನಮ್ಮ ವಿರುದ್ಧ ಬಂದಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಹಿಜಾಬ್ ತೆಗೆದು ಪರೀಕ್ಷೆ ಬರೆಯುವಂತೆ ಸೂಚಿಸಿದಾಗ ಅದಕ್ಕೆ ಒಪ್ಪದ ವಿದ್ಯಾರ್ಥಿಗಳು ಕೋರ್ಟ್ ಆದೇಶ ಬರುವವರೆಗೂ ಕಾಯುವುದಾಗಿ ಹೇಳಿದ್ದರು. ಆದರೆ ಕೋರ್ಟ್ ಆದೇಶ ಬಂದ ನಂತರ ಗ ಕ್ಲಾಸ್ ಬಿಟ್ಟು ಹೋಗುವುದಾಗಿ ಹೇಳಿ ಪರೀಕ್ಷೆ ಬಿಟ್ಟು ಹೊರ ನಡೆದಿದ್ದಾರೆ.
Hijab Verdict: ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಸಮಾಜದ ಮುಖಂಡರು ತೀರ್ಮಾನ ತೆಗೆದುಕೊಳ್ತಾರೆ ಎಂದು ಎಂಎಲ್ ಸಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.