ಹಿಜಾಬ್ ವಿವಾದದ ಕುರಿತ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕ ಸದಸ್ಯ ಪೀಠವು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
Karnataka Hijab Case: ವೈರಲ್ ಆಗಿರುವ ವಿಡಿಯೋದಲ್ಲಿ (Viral Video) ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯೋರ್ವಳನ್ನು ಸುತ್ತುವರೆದ ಜನರು ಧಾರ್ಮಿಕ ಘೋಷಣೆಗಳನ್ನು ಕೂಗುತ್ತಿದ್ದಾರೆ. ಇನ್ನೊಂದೆಡೆ ಹೇಳಿಕೆ ನೀಡಿರುವ ವಿದ್ಯಾರ್ಥಿನಿ, ಘೋಷಣೆ ಕೂಗುವವರಲ್ಲಿ ಕಾಲೇಜ್ ವಿದ್ಯಾರ್ಥಿಗಳ ಹೊರತಾಗಿ ಬಾಹ್ಯ ಜನರು ಕೂಡ ಶಾಮೀಲಾಗಿದ್ದಾರೆ ಎಂದು ಹೇಳಿದ್ದಾಳೆ.
ಸಿದ್ದರಾಮಯ್ಯನವರೇ ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದಿದ್ದೀರಿ. ಈಗ ಹಿಜಾಬ್ ಪ್ರತಿಭಟನೆಗೆ ಆಯುಧ ಸಮೇತ ಬಂದು ಸಿಕ್ಕಿ ಬಿದ್ದವರ ಬಗ್ಗೆ ಏನು ಹೇಳುತ್ತೀರಿ? ಅಂತಾ ಬಿಜೆಪಿ ಪ್ರಶ್ನಿಸಿದೆ.
Hijab Row: ಹಿಜಾಬ್ ಮುಸ್ಲಿಂ ಸಮುದಾಯದ ಒಂದು ಭಾಗ. ಬಿಜೆಪಿ ರಾಜಕೀಯ ಮಾಡುತ್ತಿದೆ. ವೋಟ್ ಗಾಗಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಜಾಬ್ ನಿಷೇಧದ ಬಗ್ಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಶನಿವಾರ ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮದು ಸ್ವತಂತ್ರ ದೇಶ, ಸಂವಿಧಾನ ನಮಗೆ ನಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನುಕಾಪಾಡುವ ಹಕ್ಕುಗಳನ್ನು ನೀಡಿದೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಜನರಿಗೆ ತಮ್ಮಿಷ್ಟದ ಉಡುಗೆ ತೊಡುವ ಸ್ವಾತಂತ್ರ್ಯ ನೀಡಿದ್ದಾರೆ ಅಂತಾ ಕಾಂಗ್ರೆಸ್ ಶಾಸಕಿ ಕನೀಝ್ ಫಾತಿಮಾ ಹೇಳಿದ್ದಾರೆ.
Popular Front of India: ಕೆಲವು ಕಾಲೇಜುಗಳು ಹಿಜಾಬ್ ಬಗ್ಗೆ ಅನಗತ್ಯ ವಿವಾದಗಳನ್ನು ಸೃಷ್ಟಿಸುತ್ತಿವೆ ಮತ್ತು ಮುಸ್ಲಿಮರ ಮೂಲಭೂತ, ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತಿವೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.