ಒಳಮೀಸಲಾತಿ ಪ್ರಮಾಣ ಬಗ್ಗೆ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದ್ದು, ಹೈಕೋರ್ಟ್ 56% ಮೀಸಲಾತಿ ಹೆಚ್ಚಳಕ್ಕೆ ತಡೆ ಕೊಟ್ಟಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನ ಸಭೆಯಲ್ಲಿಂದು ಫೋನ್ ಕದ್ದಾಳಿಕೆ ಪ್ರತಿಧ್ವನಿಸಿದೆ. ಎಚ್ ಕೆ ಪಾಟೀಲ್ ಪ್ರಸ್ತಾಪಿಸಿದ ವಿಚಾರಕ್ಕೆ, ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸದನದಲ್ಲಿ ಮಾತಿನ ಚಕಮಕಿ ನಡೆಸಿದ್ರು. ರಾಜ್ಯಪಾಲರಿಗೆ ಕೇಶವಕೃಪಾ ಹಾಗೂ ಗೃಹ ಸಚಿವಾಲಯದಿಂದ ಕರೆ ಬಂದಿದೆ ಎಂಬ ಆರೋಪಕ್ಕೆ ಬಿಜೆಪಿ ಫೋನ್ ಕದ್ದಾಲಿಕೆ ಅಸ್ತ್ರ ಪ್ರಯೋಗಿಸಿದೆ. ಪೋನ್ ಕದ್ದಾಲಿಕೆ ಪ್ರಕರಣ ಸದನದಲ್ಲೂ ದೊಡ್ಡ ಮಟ್ಟದಲ್ಲಿ ಪ್ರತಿಧ್ವನಿಸಿತು.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ .ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಠಿ ನಡೆಸಿದ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು, ಸಚಿವ ಸಂಪುಟದ ಸಭೆಯ ನಿರ್ಣಯಗಳ ಕುರಿತು ಮಾಹಿತಿ ನೀಡಿದರು.
Minister H.K. Patil: ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ತಿಳಿಸಿದರು.
ಸ್ಥಿತಿವಂತ ಮನೆತನದಿಂದ ಬಂದು ಉತ್ತಮ ವಿಧ್ಯೆ ಪಡೆದಿದ್ದ ಗಾಂಧೀಜಿ ಅವರು ವಕೀಲಿವೃತ್ತಿ ವೇಳೆ ದಕ್ಷಿಣ ಆಫ್ರಿಕಾದಲ್ಲಿನ ಸಮಾನತೆ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಪರಿ ನಂತರ ಭಾರತದಲ್ಲಿನ ಸ್ವಾತಂತ್ರ್ಯ ಹೋರಾಟದ ಸಂದರ್ಭದ ಅವರ ನಿಲುವುಗಳು ಇಂದಿನ ಜಾಗತಿಕ ಜನಾಂಗೀಯ ವೈಷಮ್ಯ, ಯುದ್ಧಾತಂಕಗಳನ್ನು ನಿವಾರಿಸುವ ಸುಲಭ ಮಂತ್ರಗಳಾಗಿವೆ.
ಬೆಳಗಾವಿಯಲ್ಲಿ 1924ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಘೋಷಿಸಿದ್ದರು
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು ಸಚಿವ ಹೆಚ್.ಕೆ. ಪಾಟೀಲ್ ಅವರು ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಗಂಭೀರ ಆರೋಪ ಮಾಡುವ ಮೂಲಕ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ.
MLA Oath Ceremony:ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಸೇರಿದರಂತೆ ರಾಜಕೀಯ ಗಣ್ಯರು ಭಾಗಿಯಾಗಿದ್ದರು.
ದಕ್ಷಿಣ ಭಾರತದ ಏಳೂ ರಾಜ್ಯಗಳಲ್ಲಿ ಪ್ರವಾಸೋದ್ಯಮಕ್ಕೆ ವಿಫುಲವಾದ ಅವಕಾಶಗಳಿವೆ. ಇವುಗಳ ಅಭಿವೃದ್ದಿಗೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹಾಗೂ ಪ್ರವಾಸೋದ್ಯಮಕ್ಕೆ ಇರುವಂತಹ ಅವಕಾಶಗಳ ಬಗ್ಗೆ ಪ್ರಚುರ ಪಡಿಸುವ ಉದ್ದೇಶದಿಂದ ಎಫ್‌ಕೆಸಿಸಿಐ ಅವರ ಜೊತೆಗೂಡಿ ಈ ಉತ್ಸವವನ್ನ ಆಯೋಜಿಸಲಾಗಿದೆ.