ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ
ಶಂಕಿತ ಹುಬ್ಬಳ್ಳಿ-ಧಾರವಾಡಗೆ ಬಂದಿರೋ ಅನುಮಾನ
ಶಂಕಿತನ ಪತ್ತೆಗೆ ಹುಬ್ಬಳ್ಳಿ-ಧಾರವಾಡದಲ್ಲೂ ಶೋಧ ಕಾರ್ಯ
ಎನ್ಐಎ ತಂಡದಿಂದ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲನೆ
ಶಂಕಿತ ಓಡಾಡಿದ ಸ್ಥಳ ಗುರುತಿಸಿ, ಸ್ಥಳೀಯರಿಂದ ಮಾಹಿತಿ ಸಂಗ್ರಹ
ಗಣೇಶ ಹಬ್ಬ ನಾಡಹಬ್ಬ ಒಂದು ಸಾಂಪ್ರದಾಯಿಕ ಆಚರಣೆ ಅಲ್ಲಾ ಅದೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಹೋರಾಟದ ಕಿಚ್ಚು ಹಚ್ಚಿದ ಹಬ್ಬ. ಈಗ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಭರ್ಜರಿ ಗಣೇಶ ಮೂರ್ತಿ ತಯಾರಿ ನಡೆದಿದೆ
ಯಾವುದೇ ಕಾರಣಕ್ಕೂ ಹುಬ್ಬಳ್ಳಿ-ಧಾರವಾಡ ಅವಳಿ ನಗರವನ್ನು ಡ್ರಗ್ಸ್ ಹಬ್ ಆಗಲು ಬಿಡುವುದಿಲ್ಲ. ಇದು ಇಲ್ಲದಂತೆ ಮಾಡಲು ಆರು ತಿಂಗಳ ಗಡುವು ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇಡೀ ರಾಜ್ಯದಲ್ಲಿ ಡ್ರಗ್ಸ್ ನಿಲ್ಲಿಸಲು ನಿರ್ಧರಿಸಿದ್ದೇವೆ. ಹುಬ್ಬಳ್ಳಿ ಧಾರವಾಡ ಗೋವಾ, ಒಡಿಶಾಗಳಿಂದ ಡ್ರಗ್ಸ್ ಬರಬಹುದು. ಇಲ್ಲಿಯ ಜನರಿಗೆ ಅನಾಹುತ ಆಗಬಾರದು ಎಂದು ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಇದನ್ನು ತಡೆಗಟ್ಟದಿದ್ದರೆ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದ್ರು.
ಶಕ್ತಿ ಯೋಜನೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಟೋ ಚಾಲಕರು ಬಂದ್ ಗೆ ಕರೆ ನೀಡಿದ್ದಾರೆ. ವಾಣಿಜ್ಯ ನಗರಿಯಲ್ಲಿ ಆಟೋ ಬಂದ್ ಗೆ ಕರೆ ನೀಡಿರುವ ಆಟೋ ಚಾಲಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಟೋ ಚಾಲಕರು ತಮ್ಮ ಆಕ್ರೋಶ ಹೊರಹಾಕಿದರು.
ಶಾಸಕ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ. ಶಿರಸಿಯಲ್ಲಿ ಸ್ಪೀಕರ್ ಕಾಗೇರಿಗೆ ರಾಜೀನಾಮೆ ಪತ್ರ ಸಲ್ಲಿಕೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ. ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಶೆಟ್ಟರ್. ಶಿರಸಿಯಿಂದ ಹುಬ್ಬಳ್ಳಿಗೆ ಬಂದು ಬಳಿಕ ಬೆಂಗಳೂರಿಗೆ ಪ್ರಯಾಣ.
ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿ ಆಂತರಿಕ ಬೆಳವಣಿಗೆ. ಜಗದೀಶ್ ಶೆಟ್ಟರ್ ಈವರೆಗೆ ನನ್ನನ್ನು ಸಂಪರ್ಕಿಸಿಲ್ಲ ಎಂದು ಮಾಜಿ ಸಿಎಂ HDK ಹೇಳಿಕೆ ನೀಡಿದ್ದಾರೆ.. ನಮಗೆ ಅಂತಹ ದೊಡ್ಡ ನಾಯಕರ ಅವಶ್ಯಕತೆ ಇಲ್ಲ ಎಂದಿದ್ದಾರೆ..
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಸಾರ್ವಜನಿಕರ ದಂಡ ಪಾವತಿಗೆ 50% ರಿಯಾಯಿತಿ ನೀಡಿದ್ದಾರೆ. ಆದರೆ ಹತ್ತು ಹದಿನೈದು ದಂಡ ಪ್ರಕರಣಗಳಿದ್ದರೂ ಕೂಡ ಯಾವುದೇ ರೀತಿಯಲ್ಲಿ ದಂಡ ಪಾವತಿಸದೇ ಇರುವ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಿದೆ. 3 ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಈದ್ಗಾ ಗ್ರೌಂಡ್ಗೆ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ನಗರದ ಪಿಬಿ ರಸ್ತೆಯ ಹಳೆ ಬಸ್ ನಿಲ್ದಾಣದಿಂದ ಬಿಡ್ನಾಳವರೆಗೆ ಮೇಲ್ಸೇತುವೆ ರಸ್ತೆ ನಿರ್ಮಿಸಿ, ಬೆಂಗಳೂರು ಮಾರ್ಗದಲ್ಲಿ ಸುಗಮ ಸಂಚಾರ ಕಲ್ಪಿಸುವ 300 ಕೋಟಿ ರೂ. ಪ್ರಸ್ತಾವನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ರಾಜ್ಯ ಸರ್ಕಾರ 50 ಲಕ್ಷ ರೂ.ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.