ಹುಬ್ಬಳ್ಳಿಯಲ್ಲಿ ತಗ್ಗು ಗುಂಡಿಗಳಲ್ಲಿ ದೀಪ ಬೆಳಗಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಬೇಕಾಬಿಟ್ಟಿ ರಸ್ತೆ ಅಗೆದಿದ್ದರಿಂದ ನಗರದ ಬಸವನದ ಬಳಿಯ ತಗ್ಗುಗುಂಡಿಗಳು ಬಿದ್ದಿದ್ದು, ಪ್ರಯಾಣಿಕರು ಚಂಚಾರಿಸುವಾಗ ನರಕಯಾತನೆ ಅನುಭವಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ರು.
ಹುಬ್ಬಳ್ಳಿಯಿಂದ ಗದಗ ರಸ್ತೆಗೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿರುವ ರೈಲ್ವೆ ಮೇಲ್ಸೆತುವೆ ನಿರಂತರವಾಗಿ ಸುರಿದ ಮಳೆಗೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ತಗ್ಗುಗುಂಡಿಗಳದ್ದೇ ಸಾಮ್ರಾಜ್ಯವಾಗಿದೆ.
ವಾಣಿಜ್ಯನಗರಿ ಹುಬ್ಬಳ್ಳಿ ಪವರಪುಲ್ ನೆಲ. ಇಲ್ಲಿನ ಆರಾಧ್ಯದೈವ ಸಿದ್ಧಾರೂಢರಿಗೆ ಭಕ್ತಿಪೂರ್ವ ಪ್ರಣಾಮಗಳು. ಹುಬ್ಬಳ್ಳಿಯನ್ನು ನೋಡಿದಾಕ್ಷಣ ಏನೋ ಒಂಥರಾ ಮನಸ್ಸಿಗೆ ಖುಷಿ ಅನುಭವ ಬರುತ್ತಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಹುಬ್ಬಳ್ಳಿಯ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದರು.
ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡದ ಉದ್ಘಾಟನೆ ಮತ್ತು ಲೋಕಾರ್ಪಣೆಯನ್ನು ನೆಪ್ಟೆಂಬರ್ 26 ರಂದು ಮಧ್ಯಾಹ್ನ 3 ಗಂಟೆಗೆ ಸತ್ತೂರು ಬಳಿಯ ಹೊಚ್ಚಹೊಸ ಕ್ಯಾಂಪಸ್ನಲ್ಲಿ ಆಯೋಜಿಸಲಾಗಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅವಕಾಶ ನೀಡಿದೆ. 3 ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಈದ್ಗಾ ಗ್ರೌಂಡ್ಗೆ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಬಹಳ ದಿನಗಳ ನಂತರ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಂತರಾಷ್ಟ್ರೀಯ ಕ್ರಿಕೇಟ್ ಪಂದ್ಯ ನಡೆಯಲಿದೆ. ಇದರಿಂದ ಕ್ರಿಕೆಟ್ ಪ್ರೇಮಿಗಳಲ್ಲಿ ಸಂಭ್ರಮ ಮನೆ ಮಾಡಿದೆ ಸುಮಾರು 3 ವರ್ಷಗಳ ಬಳಿಕ ಹುಬ್ಬಳ್ಳಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಹಂಚಿಕೆಯಾಗಿದೆ.
ಕಾಂಗ್ರೆಸ್ ಕಾರ್ಯಕರ್ತರು ಸಾವರ್ಕರ್ ಫೋಟೋ ಸುಟ್ಟ ಹಿನ್ನೆಲೆ ಬಜರಂಗದಳ ಮುಖಂಡ ಶಿವಾನಂದ ದೂರು ನೀಡಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡುತ್ತಾರೆ ಎಂದು ಹುಬ್ಬಳ್ಳಿ-ಧಾರವಾಡ ಡಿಸಿಪಿ ಸಾಹಿಲ್ ಹೇಳಿದರು.
ಮಂಗಳವಾರ ರಾತ್ರಿ ಹುಬ್ಬಳ್ಳಿಯಲ್ಲಿ ಸಿದ್ಧರಾಮಯ್ಯ ಅವರ ಹುಟ್ಟುಹಬ್ಬದ ಸಂಭ್ರಮ ಜರುಗಿದೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ ಕೇಕ್ ತಿನ್ನಿಸಿ ಶುಭ ಕೋರಿದ ಡಿ.ಕೆ.ಶಿವಕುಮಾರ್ ಶುಭ ಹಾರೈಸಿದ್ದಾರೆ.
ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈ ನಾಯಕರ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ನ ರಾಜ್ಯಕೀಯ ವ್ಯವಹಾರಗಳ ಸಮಿತಿ ಜೊತೆ ರಾಹುಲ್ ಗಾಂಧಿ ಸುಮಾರು 40 ನಿಮಿಷಗಳ ಕಾಲ ಸಭೆ ನಡೆಸಿದರು.
ಸಿದ್ಧರಾಮೋತ್ಸವ ಕಾರ್ಯಕ್ರದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ರಾತ್ರಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಮಹತ್ವದ ಸಭೆಯನ್ನು ನಡೆಸಿದ್ದಾರೆ.
ದುಷ್ಕರ್ಮಿಗಳಿಂದ ನಿನ್ನೆ ಹತ್ಯೆಗೀಡಾದ ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ ಇಂದು ಹುಬ್ಬಳ್ಳಿಯ ಸುಳ್ಳ ಗ್ರಾಮದ ಜಮೀನಿನಲ್ಲಿ ನೆರವೇರಲಿದೆ. ಇಂದು ಬೆಳಗ್ಗೆ ಪೋಸ್ಟ್ಮಾರ್ಟಂ ನಡೆಯಲಿದ್ದು, ಬಳಿಕ ಚಂದ್ರಶೇಖರ್ ಗುರೂಜಿಯವರ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
ಸರಳ ವಾಸ್ತು ಮೂಲಕ ಮನೆ ಮಾತಾಗಿದ್ದ ಚಂದ್ರಶೇಖರ್ ಗುರೂಜಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಹೊಟೇಲ್ನಲ್ಲಿ ವಾಸ್ತವ್ಯ ಹೂಡಿದ್ದ ಗುರೂಜಿ ಭೇಟಿ ಮಾಡುವ ನೆಪದಲ್ಲಿ ಬಂದಿದ್ದ ದುರುಳುರು 40 ಬಾರಿ ಚಾಕು ಇರಿದು ಹತ್ಯೆ ಮಾಡಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಚಂದ್ರಶೇಖರ್ ಗುರೂಜಿ ಹತ್ಯೆ ಕುಡಿತ ಸಂಪೂರ್ಣ ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.