ಮುಂದಿನ 24 ಗಂಟೆಗಳಲ್ಲಿ ಹವಾಮಾನದಲ್ಲಿ ಪದೇ ಪದೇ ಬದಲಾಗಲಿದ್ದು ಶುಕ್ರವಾರ ತಾಪಮಾನವು 40 ° C ದಾಟುವ ಸಾಧ್ಯತೆಯಿದೆ. ದೇಶದ ಕೆಲವು ಭಾಗಗಳಲ್ಲಿ ಹಗುರವಾದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಅಂದಾಜಿಸಿದೆ.
ದೆಹಲಿಯಲ್ಲಿ ಭಾರಿ ಮಳೆಯಿಂದಾಗಿ ಕನಿಷ್ಠ 14 ವಿಮಾನಗಳನ್ನು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶನಿವಾರ ತಿರುಗಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಈ ಪ್ರದೇಶಗಳಲ್ಲದೆ ಕೇರಳ, ಮಹೇ ಮತ್ತು ಲಕ್ಷದ್ವೀಪದಲ್ಲೂ ಸಹ ದಿನವಿಡೀ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತನ್ನ ಅಖಿಲ ಹವಾಮಾನ ಸಾರಾಂಶ ಮತ್ತು ಮುನ್ಸೂಚನೆ ಬುಲೆಟಿನ್ ನಲ್ಲಿ ಭವಿಷ್ಯ ನುಡಿದಿದೆ.
ಅನಂತಪುರ, ಗುಂಟೂರು, ಕೃಷ್ಣ, ಪೂರ್ವ ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕಡಪಾ, ಕರ್ನೂಲ್, ವಿಶಾಖಪಟ್ಟಣಂ, ವಿಜಯನಗರಂ, ಶ್ರೀಕಾಕುಲಂ ಜಿಲ್ಲೆಗಳಲ್ಲೂ ಪ್ರತ್ಯೇಕವಾದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ತಿಳಿಸಿದೆ.
ಅರೇಬಿಯನ್ ಸಮುದ್ರದಲ್ಲಿ 'ಕ್ಯಾರ್ ಚಂಡಮಾರುತ' ರಚನೆಯಿಂದ ಉಂಟಾದ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ ರಾಜ್ಯದಲ್ಲಿ ವಿವಿಧ ಪ್ರದೇಶಗಳಲ್ಲಿ ನೀರು ನುಗ್ಗಿದೆ. ಹಲವೆಡೆ ಮರಗಳು ಧರೆಗೆ ಉರುಳಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.
ನೀಲಗಿರಿ, ಕೊಯಮತ್ತೂರು, ಥೇನಿ ಮತ್ತು ದಿಂಡಿಗುಲ್ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯ್ಯತೆಯಿದ್ದು, ಜನರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಪೂರ್ವ-ಮಧ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಕರ್ನಾಟಕ ಮತ್ತು ದಕ್ಷಿಣ ಕೊಂಕಣ ಕರಾವಳಿಯಲ್ಲಿ 45-55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಕೆಲ ದಿನಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಪೂರ್ವ ಉತ್ತರಪ್ರದೇಶದಲ್ಲಿ ಈಗಾಗಲೇ ಮಳೆ ಸಂಬಂಧಿತ ಘಟನೆಗಳಿಂದಾಗಿ ಹದಿನೈದು ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಅತಿಯಾದ ಮಳೆಯಿಂದಾಗಿ 294 ಮನೆಗಳಿಗೆ ಹಾನಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.