ಪಾಕಿಸ್ತಾನದ ಪ್ರಧಾನಿಯಾಗಿ ಆಗಸ್ಟ್ 11 ರಂದು ಇಮ್ರಾನ್ ಖಾನ್ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸೇರಿ ಯಾವುದೇ ವಿದೇಶದ ನಾಯಕರಿಗೆ ಆಮಂತ್ರಣ ನೀಡಿಲ್ಲ ಎಂದು ಪಾಕ್ ನ ವಿದೇಶಾಂಗ ಇಲಾಖೆ ಸ್ಪಷ್ಟಪಡಿಸಿದೆ.
ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಕಾರ್ಯಕ್ರಮಕ್ಕೆ ಇಮ್ರಾನ್ ಖಾನ್ ಅವರು ನೀಡಿದ ಆಹ್ವಾನವನ್ನು ಸ್ವೀಕರಿಸಿದ್ದೇನೆ ಎಂದು ಪಂಜಾಬ್ ಕ್ಯಾಬಿನೆಟ್ ಸಚಿವ ನವಜೋತ್ ಸಿಂಗ್ ಸಿಧು ಹೇಳಿದರು.
ಆಗಸ್ಟ್ 14 ರ ಒಳಗಡೆ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.ಈಗ ಅವರು ಸರ್ಕಾರವನ್ನು ರಚಿಸಲು ಸಣ್ಣ ಪಕ್ಷಗಳು ಮತ್ತು ಸ್ವತಂತ್ರರಿಗೆ ತಲುಪುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಬುಧವಾರ ಮತದಾನ ಮುಕ್ತಾಯಗೊಂಡಿದ್ದು, ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ- ಇನ್ಸಾಫ್ ಪಕ್ಷ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದು, ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಆಡಳಿತಾರೂಢ ಪಿಎಂಎಲ್-ಎನ್ ಪಕ್ಷ ಹಿನ್ನಡೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.