ಹಂತ ಹಂತವಾಗಿ ನಮ್ಮ ಮೆಟ್ರೋ ಕಾಮಗಾರಿ ಮುನ್ನುಗುತ್ತಿದೆ. ಎರಡನೇ ಹಂತದಲ್ಲಿ ಫೇಸ್-3 ಕಾಮಗಾರಿಯೂ ಪ್ರಗತಿಯಲ್ಲಿದೆ. 2015ರಿಂದ ಕೈಗೆತ್ತಿಗೊಂಡಿರೋ ಕಾಮಗಾರಿಯಲ್ಲಿ ಸಾಕಷ್ಟು ತಂತ್ರಜ್ಞಾನ ಬಳಕೆ ಮಾಡಲಾಗಿದೆ. 44.65 ಕಿ.ಮೀ. ಉದ್ದದ ಕಾಮಗಾರಿ ಡಿಪಿಆರ್ ಮಾಡಿಕೊಂಡು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿಶೇಷ ಲೈನ್ ಬಗ್ಗೆ ನಮ್ಮ ಮೆಟ್ರೋ ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.
ಮಂಗಳವಾರ ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ vs ದಕ್ಷಿಣ ಆಫ್ರಿಕಾ 3ನೇ T20 ಅಂತಾರಾಷ್ಟ್ರೀಯ ಪಂದ್ಯ ಮುಕ್ತಾಯವಾಗಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 49 ರನ್ಗಳಿಂದ ಭಾರತವನ್ನು ಸೋಲಿಸಿದೆ. ಸೋಲಿನ ಬಳಿಕವೂ ಟೀಂ ಇಂಡಿಯಾ 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತ್ತು. ದಕ್ಷಿಣ ಆಫ್ರಿಕಾ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತ್ತು. ಈ ಬೃಹತ್ ಮೊತ್ತ ಬೆನ್ನಟ್ಟಿದ ಟೀಂ ಇಂಡಿಯಾ, 18.3 ಓವರ್ಗಳಲ್ಲಿ 178 ರನ್ ಗಳಿಸಲಷ್ಟೇ ಶಕ್ತವಾಗಿದೆ. ಭಾರತ ಪರ ದಿನೇಶ್ ಕಾರ್ತಿಕ್ 46, ದೀಪಕ್ ಚಹಾರ್ 31 ಮತ್ತು ರಿಷಬ್ ಪಂತ್ 27 ರನ್ ಗಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.