ಪ್ರದೇಶಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಪ್ಪಿಸಲು ತಡೆಗಟ್ಟುವ ಕ್ರಮವಾಗಿ ಏಳು ಜಿಲ್ಲೆಗಳಲ್ಲಿ ಎಂಟು ದಿನಗಳವರೆಗೆ ಇಂಟರ್ನೆಟ್ ಸೇವೆಗಳನ್ನು (Internet Service) ಸ್ಥಗಿತಗೊಳಿಸುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಗುರುವಾರ ಪ್ರಕಟಿಸಿದೆ.
ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ನಂತರ, ಪೊಲೀಸರು ನಗರದಲ್ಲಿ ಕರ್ಪ್ಯೂ ವಿಧಿಸಿರುವುದಲ್ಲದೆ ಮೂರು ದಿನಗಳ ಕಾಲ ನಗರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.
ಧಾರ್ಮಿಕ ಕಿರುಕುಳದಿಂದಾಗಿ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಪಲಾಯನಗೈದ ಹಿಂದೂಗಳು, ಸಿಖ್ಖರು, ಜೈನರು, ಪಾರ್ಸಿಗಳು, ಬೌದ್ಧರು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವ ನೀಡುವ 2019 ರ ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಉತ್ತರ ಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದೆ.
ಗುರುವಾರ ಲಖನೌ ಮತ್ತು ಸಂಭಾಲ್ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರತಿಭಟನೆಯ ಹೆಸರಿನಲ್ಲಿ ಹಿಂಸಾಚಾರದಲ್ಲಿ ಪಾಲ್ಗೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಜೊತೆಗೆ ಪ್ರತಿಭಟನಾಕಾರರಿಗೆ ಕಾನೂನು ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದರು.
ಟೆಲಿಕಾಂ ಸೇವಾ ಪೂರೈಕೆದಾರ ಭಾರ್ತಿ ಏರ್ಟೆಲ್ನ ಗ್ರಾಹಕ ಆರೈಕೆ ಗುರುವಾರ (ಡಿಸೆಂಬರ್ 19) ಹೊಸ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ಧ್ವನಿ ಕರೆಗಳು, ಎಸ್ಎಂಎಸ್ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ಗ್ರಾಹಕರಿಗೆ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.