ಚೆನ್ನೈ ಸೂಪರ್ ಕಿಂಗ್ಸ್ ಆಡಳಿತವು ಎಂಎಸ್ ಧೋನಿಯ ನಿವೃತ್ತಿ ವಿಚಾರವಾಗಿ ಅಭಿಮಾನಿಗಳಿಗೆ ಸ್ಪಷ್ಟ ಚಿತ್ರವನ್ನು ನೀಡಿದೆ.ಧೋನಿ ಫ್ರಾಂಚೈಸ್ನೊಂದಿಗೆ ತಮ್ಮ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಇನ್ನೊಂದು ಸೀಸನ್ನಲ್ಲಿ ಪಾಲ್ಗೊಳ್ಳುತ್ತಾರೆ ಎಂಬ ವಿಶ್ವಾಸದಲ್ಲಿ ಆಡಳಿತವಿದೆ ಎನ್ನಲಾಗಿದೆ.
ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021 ಅಂಕಗಳ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ತೃಪ್ತಿ ಪಡುವ ಮೂಲಕ ಮತ್ತೊಮ್ಮೆ ಪ್ಲೇ ಆಫ್ ಗೆ ಅರ್ಹತೆ ಪಡೆಯಲು ವಿಫಲವಾಗಿದೆ.
ಕಳೆದ ಐಪಿಎಲ್ ಋತುವಿನಲ್ಲಿ ಆ್ಯಂಕರಿಂಗ್ ಮೂಲಕ ಗಮನ ಸೆಳೆದಿದ್ದ ತಮ್ಮ ನೆಚ್ಚಿನ ಆ್ಯಂಕರ್ ಕಿರಾ ನಾರಾಯಣನ್ ಅವರನ್ನು ಕಣ್ತುಂಬಿಕೊಳ್ಳಬೇಕೆಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಅದು ಸಾಧ್ಯವಾಗಿಲ್ಲ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು 100 ನೇ ಗೆಲುವು ಸಾಧಿಸಲು ಶ್ರೀಕರ್ ಭರತ್ ಪಂದ್ಯದ ಎಸೆತದಲ್ಲಿ ಸಿಡಿಸಿದ ಸಿಕ್ಸರ್ ಸಹಾಯ ಮಾಡಿತು.
ಅಬುಧಾಬಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಐಪಿಎಲ್ 2021 ರ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಇಶಾನ್ ಕಿಶನ್ ಮುಂಬೈ ಇಂಡಿಯನ್ಸ್ ಪರವಾಗಿ ವೇಗದ ಅರ್ಧಶತಕವನ್ನು ದಾಖಲಿಸಿದ್ದಾರೆ.
ಗುರುವಾರದಂದು ನಡೆದ ಐಪಿಎಲ್ 2021 ರ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವು ಸಾಧಿಸಿದ್ದರಿಂದಾಗಿ ಈಗ ಅದು ಪ್ಲೇ ಆಫ್ ನಲ್ಲಿ ಸ್ಥಾನ ಪಡೆಯುವ ಭರವಸೆಯನ್ನು ಹೊಂದಿದೆ.
ಅಕ್ಟೋಬರ್ 5 ರಂದು ಇಂಡಿಯಾ ಸಿಮೆಂಟ್ಸ್ನ 75 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಭಿಮಾನಿಗಳೊಂದಿಗೆ ಮಾತನಾಡಿದ ಎಂಎಸ್ ಧೋನಿ ನಾನು ಫೇರ್ವೆಲ್ ಆಟ ಆಡುವುದನ್ನು ನೋಡಬಹುದು. ಆದ್ದರಿಂದ ನನಗೆ ವಿದಾಯ ಹೇಳುವ ಅವಕಾಶವನ್ನು ಪಡೆಯುತ್ತೀರಿ ಎಂದು ಹೇಳಿದ್ದಾರೆ.
ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2021 ಟೂರ್ನಿಯ 51 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ ಎಂಟು ವಿಕೆಟ್ ಗಳ ಸುಲಭ ಗೆಲುವನ್ನು ಸಾಧಿಸಿದೆ.
ಟೀಂ ಇಂಡಿಯಾ ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಪರವಾಗಿ ಕೆ.ಎಲ್ ರಾಹುಲ್ ನೀಡುತ್ತಿರುವ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಅನೇಕರು ಅವರನ್ನು ಭಾರತ ಕ್ರಿಕೆಟ್ ತಂಡದ ಭವಿಷ್ಯದ ನಾಯಕ ಎಂದು ಭಾವಿಸಿದ್ದಾರೆ.
ಶಾರ್ಜಾದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ 48ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ತಂಡವು 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿದೆ.
ಅಬುಧಾಬಿಯ ಶೇಕ್ ಜಾಯೆದ್ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ 47 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ತಾನ ರಾಯಲ್ಸ್ ಏಳು ವಿಕೆಟ್ ಗಳ ಗೆಲುವನ್ನು ಸಾಧಿಸಿದೆ.
ಗೇಲ್ ತಾನು ಬಹಳ ಸಮಯದಿಂದ ಬಯೋಬಬಲ್ನಲ್ಲಿದ್ದೇನೆ ಮತ್ತು ಟಿ 20 ವಿಶ್ವಕಪ್ಗೆ ಮುಂಚಿತವಾಗಿ ತನಗೆ ವಿರಾಮ ತೆಗೆದುಕೊಳ್ಳಲು ಬಯಸುತ್ತೇನೆ, ಅಲ್ಲದೆ, ಟಿ 20 ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ಗೆ ರಿಫ್ರೆಶ್ ಆಗಬೇಕಿದೆ ಎಂದು ಹೇಳಿದ್ದಾರೆ. ಪಂಜಾಬ್ ಕಿಂಗ್ಸ್ ಐಪಿಎಲ್ 2021 ಅಂಕ ಪಟ್ಟಿಯಲ್ಲಿ 8 ಅಂಕಗಳೊಂದಿಗೆ 6 ನೇ ಸ್ಥಾನದಲ್ಲಿದೆ. ಪ್ಲೇಆಫ್ ತಲುಪುವ ಭರವಸೆ ಇನ್ನೂ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ, ಗೇಲ್ ಈ ರೀತಿ ಕೈ ಕೊಟ್ಟಿರುವುದು ಅವರಿಗೆ ದೊಡ್ಡ ಹೊಡೆತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.