ದೆಹಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೊರೊನಾ ಪ್ರಕರಣಗಳು ಕಂಡು ಬಂದಿರುವ ಹಿನ್ನಲೆಯಲ್ಲಿ ಈಗ ಪುಣೆಯಲ್ಲಿ ನಡೆಯಬೇಕಾಗಿದ್ದ ಐಪಿಎಲ್ ಪಂದ್ಯವನ್ನು ಮುಂಜಾಗ್ರತೆ ಕ್ರಮವಾಗಿ ಮುಂಬೈಗೆ ಸ್ಥಳಾಂತರಿಸಲು ಬಿಸಿಸಿಐ ತಿರ್ಮಾನಿಸಿದೆ.ಈ ಕುರಿತಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಸಿಸಿಐ, ಪ್ರಕರಣ ಹೆಚ್ಚಳದಂತಹ ಯಾವುದೇ ಸಂಭವ ಉಂಟಾಗುವುದನ್ನು ತಪ್ಪಿಸಲು ಪಂದ್ಯದ ಸ್ಥಳವನ್ನು ಬದಲಾಯಿಸಲಾಗುತ್ತಿದೆ ಎಂದು ಘೋಷಿಸಿದೆ.
ಐಪಿಎಲ್ 2022 ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ದಿನೇಶ್ ಕಾರ್ತಿಕ್ ಈಗ ಮತ್ತೊಮ್ಮೆ ಟೀಮ್ ಇಂಡಿಯಾಗೆ ವಾಪಸ್ ಬರುತ್ತಾರಾ? ಎನ್ನುವ ಪ್ರಶ್ನೆ ಕಾಡುತ್ತಿದೆ.
ಇಲ್ಲಿನ ಬ್ರಾಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಏಳು ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ನ ಆಲ್ರೌಂಡರ್ ಮಿಚೆಲ್ ಮಾರ್ಷ್ ಅವರು ಈಗ ಕನಿಷ್ಠ 10 ದಿನಗಳ ಕಾಲ ಐಪಿಎಲ್ ನಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿದೆ.ಹೌದು, ಈಗ ಅವರಿಗೆ ಎರಡನೇ ಆರ್ಟಿಪಿಸಿಆರ್ ಪರೀಕ್ಷೆಯಲ್ಲಿ ಕೊರೊನಾ ಧೃಡಪಟ್ಟಿರುವುದರಿಂದ ಈಗ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯಲಿರುವ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ.
ಸಾಮಾನ್ಯವಾಗಿ ಡೆತ್ ಓವರ್ ಗಲ್ಲಿ ಬೌಲಿಂಗ್ ಮಾಡುವುದೆಂದರೆ ಅದು ಸಾಮಾನ್ಯ ಕೆಲಸವಲ್ಲ,ಅದರಲ್ಲೂ ಟಿ20ಯಂತಹ ಪಂದ್ಯಗಳಲ್ಲಿ ಇದು ಇನ್ನೂ ಕಷ್ಟದ ಕೆಲಸ ಎಂದು ಹೇಳಬಹುದು.ಇಂತಹ ಸಂದರ್ಭದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಬೌಲರ್ ಉಮ್ರಾನ್ ಮಲಿಕ್ ಪಂಜಾಬ್ ಕಿಂಗ್ಸ್ ವಿರುದ್ಧ ಅಪರೂಪದ ದಾಖಲೆಗೆ ಕಾರಣಕರ್ತರಾಗಿದ್ದಾರೆ.
ಇತ್ತೀಚಿಗಷ್ಟೇ ಕ್ರೀಡೆ ಮತ್ತು ಚಲನಚಿತ್ರ ಮಾಧ್ಯಮದ ಮೂಲಕ ಮನರಂಜಿಸಲು ಕೈಜೋಡಿಸಿದ್ದ ಹೊಂಬಾಳೆ ಫಿಲಂಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈಗ ಆರ್ಸಿಬಿ ತಂಡದ ಆಟಗಾರರಿಗೆ ಕೆಜಿಎಫ್ 2 ಚಿತ್ರದ ವಿಶೇಷ ಶೋ ವೊಂದನ್ನು ಆಯೋಜಿಸಿದೆ.ಈ ಕುರಿತಾಗಿ ಟ್ವೀಟ್ ಮಾಡಿರುವ ರಾಯಲ್ ಚಾಲೆಂಜರ್ ಬೆಂಗಳೂರು "ಇಂದು ರಾತ್ರಿ ಆರ್ಸಿಬಿ ಬಯೋ ಬಬಲ್ ನಲ್ಲಿ ಕೆಜಿಎಫ್ ಚಾಪ್ಟರ್ 2 ಚಿತ್ರದ ವಿಶೇಷ ಪ್ರೀಮಿಯರ್ ಶೋವನ್ನು ಆಯೋಜಿಸಲಾಗುತ್ತದೆ "ಎಂದು ಟ್ವೀಟ್ ಮಾಡಿದೆ.
ರಾಯಲ್ ಚಾಲೆಂಜರ್ಸ್ ಆಟಗಾರ ವಿರಾಟ್ ಕೊಹ್ಲಿ ಇದುವರೆಗೆ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಕೇವಲ ಎರಡು ಬಾರಿ ಅವರು 40ಕ್ಕೂ ಅಧಿಕ ರನ್ ಗಳನ್ನು ಗಳಿಸಿದ್ದಾರೆ. ಆದರೆ ಈ ಹಿಂದಿನ ಫಾರ್ಮ್ ನ್ನು ಗಮನಿಸಿದಾಗ ವಿರಾಟ್ ಕೊಹ್ಲಿ ತಮ್ಮ ಎಂದಿನ ಸರಾಗ ಆಟವನ್ನು ಆಡುತ್ತಿಲ್ಲ ಎನ್ನುವುದನ್ನು ನಾವು ಗಮನಿಸಬಹುದು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿನೇಶ್ ಕಾರ್ತಿಕ್ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 34 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಐದು ಸಿಕ್ಸರ್ ಗಳ ಮೂಲಕ ಭರ್ಜರಿ 66 ರನ್ ಗಳಿಸಿದರು.ಆ ಮೂಲಕ ತಮ್ಮಲ್ಲಿನ ಕ್ರಿಕೆಟ್ ಆಟ ಇನ್ನೂ ಮುಗಿದಿಲ್ಲ ಎಂದು ಅವರು ಸೂಚ್ಯವಾಗಿ ಸಾಬೀತುಪಡಿಸಿದ್ದಾರೆ.
ಬ್ರಬೋರ್ನ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಅವರು ಕೇವಲ 56 ಎಸೆತಗಳಲ್ಲಿ ಮೂರನೇ ಐಪಿಎಲ್ ಶತಕವನ್ನು ಗಳಿಸಿದರು.ಟೈಮಲ್ ಮಿಲ್ಸ್ ಅವರ ಎಸೆತದಲ್ಲಿ ಬೌಂಡರಿ ಗಳಿಸುವ ಮೂಲಕ ಶತಕವನ್ನು ಗಳಿಸಿದರು.ಅವರ ಈ ಭರ್ಜರಿ ಇನಿಂಗ್ಸ್ ನಲ್ಲಿ ಬರೋಬ್ಬರಿ ಒಂಬತ್ತು ಬೌಂಡರಿ ಹಾಗೂ ಐದು ಸಿಕ್ಸರ್ ಗಳನ್ನು ಸಿಡಿಸಿದರು.
ಟೂರ್ನಿಯಲ್ಲಿ ಆಡಿರುವ 5 ಪಂದ್ಯಗಳಲ್ಲಿ 3 ಆಟವನ್ನು ಆರ್ಸಿಬಿ ತಂಡ ಗೆದ್ದಿದ್ದು, ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಇಲ್ಲಿಯವರೆಗೂ ಆಡಿರುವ 4 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್, 2 ಪಂದ್ಯಗಳನ್ನು ಗೆದ್ದಿದ್ದು, ಉಳಿದೆರಡು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 2022 ನಲ್ಲಿ ಹೆಚ್ಚಿನ ತಂಡಗಳು, ಹೆಚ್ಚಿನ ಆಟಗಾರರು ಮತ್ತು ಹೆಚ್ಚಿನ ಪಂದ್ಯಗಳನ್ನು ಆಡಲಾಗುವುದರಿಂದಾಗಿ ಇದಕ್ಕೆ ವಿಮಾ ಪಾಲಿಸಿ ಮಾಡಿಸಲಾಗಿದೆ. ಅಷ್ಟಕ್ಕೂ ಈ ವಿಮಾ ಪಾಲಸಿ ಮೊತ್ತವು ಭಾರತದಲ್ಲಿ ಯಾವುದೇ ಕ್ರೀಡಾಕೂಟಕ್ಕಾಗಿ ಖರೀದಿಸಿದ ಅತಿದೊಡ್ಡ ಮೊತ್ತ ಎಂದು ಹೇಳಲಾಗುತ್ತಿದೆ.
2022 ರ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಐದು ಪಂದ್ಯಗಳಲ್ಲಿ ಸೋತಿದೆ ಮತ್ತು ಉಳಿದ 9 ಪಂದ್ಯಗಳಲ್ಲಿ ಕನಿಷ್ಠ 8 ಪಂದ್ಯಗಳನ್ನು ಗೆಲ್ಲಬೇಕಾಗಿರುವುದರಿಂದ ಪ್ಲೇಆಫ್ನ ರೇಸ್ಗೆ ಎಂಟ್ರಿ ನೀಡಬಹುದು. ಇಲ್ಲದಿದ್ದರೆ ಕಷ್ಟವಾಗಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ನಂತರ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಈ ಪಂದ್ಯದಲ್ಲಿ ಆಡಲಿದೆ, ಆದರೆ ತಂಡವು ತುಂಬಾ ಬಲಿಷ್ಠವಾಗಿದೆ ಮತ್ತು ಹಿಂದಿನ ಪಂದ್ಯದ ಸೋಲಿನಿಂದ ಹಿಂತಿರುಗಲು ಬಯಸುತ್ತದೆ. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಐದು ಪಂದ್ಯಗಳಿಂದ ಆರು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
ಸಧ್ಯ ಗುಜರಾತ್ ಐದು ಪಂದ್ಯಗಳಲ್ಲಿ ನಾಲ್ಕು ಮ್ಯಾಚ್ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ರನ್ ಗಳಿಸುವ ವಿಷಯದಲ್ಲಿ ಹಾರ್ದಿಕ್ ಸದ್ಯ ಎರಡನೇ ಸ್ಥಾನದಲ್ಲಿದ್ದು, ಇದರೊಂದಿಗೆ ಉತ್ತಮ ಬೌಲಿಂಗ್ ಕೂಡ ಮಾಡುತ್ತಿದ್ದಾರೆ.
ಆಡಿದ 5 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿರುವ ಕೋಲ್ಕತ್ತಾ ತಂಡವು ತನ್ನ ಸಾಮರ್ಥ್ಯವನ್ನು ಈಗಾಗಲೇ ತೋರಿಸಿದೆ. ಬಲಿಷ್ಟ ತಂಡಗಳಿಗೆ ಮಣ್ಣುಮುಕ್ಕಿಸಿರುವ ಶ್ರೇಯಸ್ ಅಯ್ಯರ್ ಪಡೆ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.
ಹಾರ್ದಿಕ್ ಪಾಂಡ್ಯ ಅವರ ‘ರಾಕೆಟ್ ಥ್ರೋ’ಗೆ ಸಂಜು ಸ್ಯಾಮ್ಸನ್ ರನ್ ಔಟ್ ಆಗಿದ್ದನ್ನು ನೋಡಿ ಅಭಿಮಾನಿಗಳು ಆಶ್ಚರ್ಯಚಕಿತರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್ನ 8ನೇ ಓವರ್ನಲ್ಲಿ ಹಾರ್ದಿಕ್ ಪಾಂಡ್ಯ ಅವರು ಸಂಜು ಸ್ಯಾಮ್ಸನ್ ಅವರನ್ನು ‘ರಾಕೆಟ್ ಥ್ರೋ’ ಮೂಲಕ ರನ್ ಔಟ್ ಮಾಡಿದ್ದು ಮಾತ್ರವಲ್ಲದೆ ಸ್ಟಂಪ್ ಅನ್ನು ಮುರಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.