Karnataka Election: ಚುನಾವಣೆ ಮುಗಿದ ಬೆನ್ನಲೇ ಮಾಧ್ಯಮದ ಜೊತೆ ಮಾತನಾಡಿದ ಜಗದೀಶ್ ಶೆಟ್ಟರು, ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಹಣ ನೀಡಿದ್ದಾರೆಂದು ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Karnataka Election 2023: ಈ ಚುನಾವಣೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ತೇನೆ. ಬಹಳಷ್ಟು ಕಡೆ ಅಂಡರ್ ಕರೆಂಟ್ ಇದೆ. ಏನಾದ್ರೂ ಷಡ್ಯಂತ್ರ ಮಾಡಿ ಜಗದೀಶ್ ಶೆಟ್ಟರ್ ರನ್ನು ಸೋಲಿಸಲು ಯತ್ನಿಸಿದ್ದಾರೆ. ಎಲ್ಲಿಯೂ ವಿರೋಧ ಪಕ್ಷದ ಅಭ್ಯರ್ಥಿ ಹೆಸರು ಹೇಳಿ ಸೋಲಿಸಿ ಅಂತ ಹೇಳಿಲ್ಲ. ಆದ್ರೆ ಬಿಜೆಪಿ ಘಟಾನುಘಟಿ ನಾಯಕರು ಶೆಟ್ಟರ್ ರನ್ನು ಸೋಲಿಸಿ ಅಂತ ಕರೆ ನೀಡಿದ್ರು ಎಂದು ಜಗದೀಶ್ ಶೆಟ್ಟರ್ ಹೇಳಿದರು.
ರಾಜ್ಯದ ಉದ್ದಗಲಕ್ಕೆ ಸಂಚರಿಸಿ BJP ಸಂಘಟನೆ ಮಾಡಿದ್ದೆ. ಹುಡುಗನಿಗೆ ಹೇಳುವ ಹಾಗೆ ನನಗೆ ಪಕ್ಷ ಬಿಡುವಂತೆ ಹೇಳಿದ್ರು. ಕೆಲವೇ ಕೆಲವು ಜನರ ಹಿಡಿತದಲ್ಲಿ ಬಿಜೆಪಿ ಇದೆ ಎಂದು ಧಾರವಾಡದ ಕಾಂಗ್ರೆಸ್ ಸಮಾವೇಶದಲ್ಲಿ ಶೆಟ್ಟರ್ ಕಿಡಿಕಾರಿದ್ರು.
ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಒಬ್ಬ ಶಾಸಕನಾಗಿ ಕೆಲಸ ಮಾಡಲು ಇನ್ನೂ ಅವಕಾಶವಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ರು. ಇನ್ನು ಟಿಕೆಟ್ ಇಲ್ಲ ಅನ್ನೋ ವಾತಾವರಣ ಯಾಕೆ ಬಂತು ಗೊತ್ತಿಲ್ಲ. ಯಾವುದೇ ಕಳಂಕ ನನ್ನ ಮೇಲೆ ಇಲ್ಲ ಎಂದ್ರು ಶೆಟ್ಟರ್.
ಕಾಂಗ್ರೆಸ್ ಪಕ್ಷವು ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಆದರೆ ಅಚ್ಚರಿ ಎನ್ನುವಂತೆ ಈಗ ಅದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯನ್ನು ಘೋಷಿಸದೆ ಹಾಗೆ ಬಿಟ್ಟಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಮುಸ್ಲಿಂ ಮತದಾರರ ಓಲೈಕೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಸಿದ್ರಾಮುಲ್ಲಾ ಖಾನ್ ಆಗಿದ್ದಾರೆ ಎಂದು ಕಾಲೆಳೆಯುತ್ತಿದ್ದ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಟಾಂಗ್ ನೀಡಿದೆ. ಬಿಜೆಪಿ ವರಿಷ್ಠ ನಿತಿನ್ ಗಡ್ಕರಿ ಹಾಗೂ ರಾಜ್ಯ ನಾಯಕರು ಮುಸ್ಲಿಂ ಟೋಪಿ ಹಾಕಿಕೊಳ್ಳುವ ಫೋಟೋ ಟ್ವೀಟರ್ನಲ್ಲಿ ಬಿಡುಗಡೆ ಮಾಡಿರುವ ಕಾಂಗ್ರೆಸ್, ಗಡ್ಕರಿಯವರಿಗೆ ಮಹಮದ್ ಗಡ್ಕರಿ ಶೇಕ್ ಎಂದು ಮರುನಾಮಕರಣ ಮಾಡುವಿರಾ ಎಂದು ಹಾಗೂ ಜಗದೀಶ್ ಶೆಟ್ಟರ್ ಹಾಗೂ ಆರ್ ಅಶೋಕ್ಗೆ "ಅಶ್ವಾಖ್ ಇನಾಯತ್ ಖಾನ್" ಎಂದು ಹೆಸರಿಡುತ್ತೀರಾ ಅಂತ ವ್ಯಂಗ್ಯವಾಡಿದೆ.
ಹುಬ್ಬಳ್ಳಿಯಲ್ಲಿ ತಗ್ಗು ಗುಂಡಿಗಳಲ್ಲಿ ದೀಪ ಬೆಳಗಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಬೇಕಾಬಿಟ್ಟಿ ರಸ್ತೆ ಅಗೆದಿದ್ದರಿಂದ ನಗರದ ಬಸವನದ ಬಳಿಯ ತಗ್ಗುಗುಂಡಿಗಳು ಬಿದ್ದಿದ್ದು, ಪ್ರಯಾಣಿಕರು ಚಂಚಾರಿಸುವಾಗ ನರಕಯಾತನೆ ಅನುಭವಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.