ಭಾನುವಾರ ಫೆ.26ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಬ್ಯಾಂಕ್ ಭದ್ರಾತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಸಂಜಯ್ ಶರ್ಮಾ ಎಂಬುವರು ಮೃತ ಪಟ್ಟಿದ್ದಾರೆ. ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪುಲ್ವಾಮಾದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರು ಕಾಶ್ಮೀರಿ ಪಂಡಿತ್ ಗುಂಪಿಗೆ ಸೇರಿದವರಾಗಿದ್ದು, ಕಳೆದ 40 ವರ್ಷಗಳಿಂದ ಬ್ಯಾಂಕ್ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
Jammu Kashmir: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭೂಕುಸಿತವಾದ ಪರಿಣಾಮ 13 ಮನೆಗಳು ನಾಶವಾಗಿವೆ. ಸಂತ್ರಸ್ತ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Amit Shah: ಕಳೆದ 70 ವರ್ಷಗಳಲ್ಲಿ ಕಾಶ್ಮೀರಕ್ಕೆ 12 ಸಾವಿರ ಕೋಟಿ ರೂ. ಹೂಡಿಕೆ ಮಾಡಲಾಗಿತ್ತು. ಆದರೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ಕೇವಲ 3 ವರ್ಷಗಳಲ್ಲಿ 12 ಸಾವಿರ ಕೋಟಿ ರೂ. ಹಣವನ್ನು ಅಭಿವೃದ್ಧಿಗಾಗಿ ವಿನಿಯೋಗಿಸಲಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಹಿಮಪಾತದಿಂದಾಗಿ ಏರ್ಲಿಫ್ಟ್ ಮಾಡಲು ಅಸಾಧ್ಯವಾಗಿದ್ದರಿಂದಾಗಿ ಈಗ ಜಮ್ಮು ಮತ್ತು ಕಾಶ್ಮೀರದ ದೂರದ ಕೆರಾನ್‌ನಲ್ಲಿ ಹೆರಿಗೆ ಸಮಸ್ಯೆಯನ್ನು ಹೊಂದಿದ್ದ ಗರ್ಭಿಣಿ ಮಹಿಳೆಗೆ ವಾಟ್ಸಪ್ ಕರೆ ಮೂಲಕ ಈಗ ಮಗುವಿಗೆ ಜನ್ಮ ನೀಡುವಲ್ಲಿ ವೈದ್ಯರು ಸಹಾಯ ಮಾಡಿದ್ದಾರೆ.
Jammu-Kashmir Terrorism : ಜಮ್ಮು-ಕಾಶ್ಮೀರ ಪೊಲೀಸರಿಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನರ್ವಾಲ್ ಪ್ರದೇಶದಲ್ಲಿ ನಡೆದ ಡಬಲ್ ಸ್ಫೋಟದಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಹಿಜ್ಬ್-ಉಲ್-ಮುಜಾಹಿದ್ದೀನ್ ಸಂಘಟನೆಯ ಐವರು ಭಯೋತ್ಪಾದಕ ಸಹಚರರನ್ನು ಬಂಧಿಸಲಾಗಿದ್ದು, ಅವರ ವಶದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
Weather Reports: ಹವಾಮಾನ ಇಲಾಖೆ ಪ್ರಕಾರ, ಇಂದು ದೆಹಲಿಯಲ್ಲಿ ಕನಿಷ್ಠ ತಾಪಮಾನ 8 ಡಿಗ್ರಿ ಮತ್ತು ಗರಿಷ್ಠ ತಾಪಮಾನ 25 ಡಿಗ್ರಿ ಇರಲಿದೆ. ಬೆಳಿಗ್ಗೆ ದೆಹಲಿಯಲ್ಲಿ ಲಘು ಮಂಜು ಆಗಿದ್ದು, ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ದತ್ತಾಂಶವು ರಾಷ್ಟ್ರೀಯ ರಾಜಧಾನಿಯ ವಾಯು ಗುಣಮಟ್ಟ ಸೂಚ್ಯಂಕ (AQI) ಅತ್ಯಂತ ಕಳಪೆ ವರ್ಗದಲ್ಲಿ ಉಳಿದಿದೆ ಎಂದು ತೋರಿಸಿದೆ.
Farooq Abdullah: ಜಮ್ಮು ಮತ್ತು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯ ಮತದಾನದ ನಡುವೆ ಫಾರೂಕ್ ಅಬ್ದುಲ್ಲಾ ಅವರು ಭಾರತೀಯ ಸೇನೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದು ಮತ್ತೆ ಪುನರಾವರ್ತನೆಯಾಗಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ತರಲು ಬಿಜೆಪಿ ಬದ್ಧವಾಗಿದೆ ಆದರೆ ಎಲ್ಲಾ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳು ಮತ್ತು ಚರ್ಚೆಗಳನ್ನು ಅನುಸರಿಸಿದ ನಂತರ ಮಾತ್ರವೇ ಅದನ್ನು ಕಾರ್ಯಗತಗೊಳಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
ಆಜಾನ್ ಸಮಯದಲ್ಲಿ ಅಮಿತ್ ಶಾ ಅವರು ತಮ್ಮ ಭಾಷಣವನ್ನು ನಿಲ್ಲಿಸಿದ ವೀಡಿಯೊವನ್ನು ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ನೆಟಿಜನ್‌ಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಗಳೂ ಬಂದಿವೆ.
Suspicious Drone Spotted: ಜಮ್ಮು ಮತ್ತು ಕಾಶ್ಮೀರದ ಪಾಕಿಸ್ತಾನಕ್ಕೆ ಹೊಂದಿಕೊಂಡಂತೆ ಇರುವ ಗಡಿ ಗ್ರಾಮಗಳಲ್ಲಿ ಪಾಕಿಸ್ತಾನದ ಒಂದು ಅನುಮಾನಾಸ್ಪದ ಡ್ರೋನ್ ಅನ್ನು ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಕೂಡಲೇ ಭದ್ರತಾ ಪಡೆಗಳಿಗೆ ಮಾಹಿತಿಯನ್ನು ನೀಡಿದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಕರಣ್ ಸಿಂಗ್, 'ನಾನು 1967ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇ. ಆದರೆ, ಕಳೆದ 8 ರಿಂದ 10 ವರ್ಷಗಳಲ್ಲಿ ನಾನು ಸಂಸದನಾಗಿಲ್ಲ. ಕಾಂಗ್ರೆಸ್ ಪಕ್ಷದ ವರ್ಕಿಂಗ್ ಕಮೀಟಿಯಿಂದ ಕೂಡ ನನ್ನನ್ನು ಹೊರಗಿಡಲಾಗಿದೆ. ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ ಆದರೆ ಯಾವುದೇ ಸಂಪರ್ಕವಿಲ್ಲ' ಎಂದು ಹೇಳಿದ್ದಾರೆ.
ಭದ್ರತಾ ಪಡೆಗಳ 39 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸಿವಿಲ್ ಬಸ್ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್ ಗ್ರಾಮದ ಬಳಿ ನದಿ ದಡಕ್ಕೆ ಉರುಳಿರುವುದಾಗಿ ವರದಿ ಆಗಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಸೇರಿದಂತೆ ವಿವಿಧ ಸ್ಪೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.