ಕಾಶ್ಮೀರದಲ್ಲಿ ಶುಕ್ರವಾರದಂದು ಮೂರು ಪ್ರತ್ಯೇಕ ಭಯೋತ್ಪಾದಕ ದಾಳಿಗಳು ವರದಿಯಾಗಿದ್ದು, ಇಂದು ಶ್ರೀನಗರದಲ್ಲಿ ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಮತ್ತು ಇನ್ನೊಬ್ಬ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟ್ನಿಟಾಪ್ ಪ್ರದೇಶದಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಶಿವ್ ಗರ್ ಧರ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ವಸತಿ ಗೃಹದಲ್ಲಿ ನಡೆದ ಸ್ಫೋಟದಲ್ಲಿ 17 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಮತ್ತು ಇತರ ಆರು ಮಂದಿ ಗಾಯಗೊಂಡಿದ್ದಾರೆ, ಅಧಿಕಾರಿಗಳು ಸ್ಫೋಟದ ನಿಖರ ಸ್ವರೂಪವನ್ನು ತಕ್ಷಣವೇ ಸ್ಪಷ್ಟಪಡಿಸಿಲ್ಲ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ದಾಳಿಗೆ ಭಾರತೀಯ ಭದ್ರತಾ ಸಂಸ್ಥೆಗಳು ಎಚ್ಚರಿಕೆ ನೀಡಿವೆ.ಮೂಲಗಳ ಪ್ರಕಾರ ಐವರು ಜೈಶ್ ಭಯೋತ್ಪಾದಕರು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಮೂಲಕ ಕೇಂದ್ರಾಡಳಿತ ಪ್ರದೇಶಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.
Jammu and Kashmir: ಮಂಗಳವಾರ ಮುಂಜಾನೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದಾಗ ಕಾರ್ಯಾಚರಣೆ ಎನ್ ಕೌಂಟರ್ ಆಗಿ ಬದಲಾಯಿತು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಎರಡು ದಶಕಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಚಳುವಳಿಯನ್ನು ಮುನ್ನಡೆಸುತ್ತಿರುವ ಪ್ರತ್ಯೇಕತಾವಾದಿ ಸಂಘಟನೆಯಾದ ಹುರಿಯತ್ ಕಾನ್ಫರೆನ್ಸ್ನ ಎರಡೂ ಬಣಗಳ ಮೇಲೆ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ ನಿಷೇಧವನ್ನು ವಿಧಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ, ಶ್ರೀನಗರದ ಸರಾಫ್ ಕಡಲ್ ಪ್ರದೇಶದಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಎರಡು ಗ್ರೆನೇಡ್ಗಳನ್ನು ಎಸೆದರು. ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಒಟ್ಟು 3 ಜನರು ಗಾಯಗೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಯ ಕ್ರಮದಿಂದ ಪಾಕಿಸ್ತಾನಕ್ಕೆ ತೊಂದರೆಯಾಗಿದೆ. ಜಮ್ಮು ಕಾಶ್ಮೀರದಲ್ಲಿ ವಿಧಿ 35 ಎ ಮತ್ತು 370 ಅನ್ನು ತೆಗೆದುಹಾಕಿದ ನಂತರ, ಪಾಕಿಸ್ತಾನವು ಕಣಿವೆಯಲ್ಲಿ ಶಾಂತಿ ಕದಡಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಈ ಭಯೋತ್ಪಾದಕ ದಾಳಿಗಳು ಅದಕ್ಕೆ ಕನ್ನಡಿ ಹಿಡಿದಂತಿದೆ.
ಕಾಶ್ಮೀರ ಪೊಲೀಸ್ ಐಜಿ ವಿಜಯ್ ಕುಮಾರ್ (Vijay Kumar) ಅಗ್ರ 10 ಭಯೋತ್ಪಾದಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕೆಲವು ಹಳೆಯ ಮತ್ತು ಕೆಲವು ಹೊಸ ಭಯೋತ್ಪಾದಕರ ಹೆಸರುಗಳಿವೆ. ಕಣಿವೆಯ ಈ ಅಗ್ರ 10 ಭಯೋತ್ಪಾದಕರು ಪೊಲೀಸರ ಗುರಿಯಲ್ಲಿದ್ದಾರೆ.
Jammu Temples On High Alert! ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳು ಭಾರತದಲ್ಲಿ ದೊಡ್ಡ ಭಯೋತ್ಪಾದಕ ಘಟನೆಗಳನ್ನು ನಡೆಸಲು ಪ್ರಯತ್ನಿಸುತ್ತಿವೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾ ಭಾರತದಲ್ಲಿ ಕೋಮು ಉದ್ವಿಗ್ನತೆಯನ್ನು ಹರಡಲು ದೇವಸ್ಥಾನಗಳ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸುತ್ತಿವೆ.
ಸಾಂಬಾದಲ್ಲಿನ ಕ್ಲಿಯಾರಿ ಅಂತಾರಾಷ್ಟ್ರೀಯ ಗಡಿಯ ಬಳಿ ಶಂಕಿತ ಡ್ರೋನ್ ಮೇಲೆ ಗಡಿ ಭದ್ರತಾ ಪಡೆ ಕೆಲವು ಸುತ್ತಿನ ಗುಂಡುಗಳನ್ನು ಹಾರಿಸಿತು. ಆದಾಗ್ಯೂ, ಡ್ರೋನ್ ಸ್ಥಳದಿಂದ ಪರಾರಿಯಾಗಲು ಯಶಸ್ವಿಯಾಯಿತು ಎಂದು ತಿಳಿದುಬಂದಿದೆ.
ಬುಧವಾರ ಮತ್ತು ಗುರುವಾರ ಮಧ್ಯರಾತ್ರಿಯಲ್ಲಿ ಜಮ್ಮುವಿನಲ್ಲಿ ಡ್ರೋನ್ ಪತ್ತೆಯಾದ ಒಂದು ದಿನದ ನಂತರ, ಜಮ್ಮು ಮತ್ತು ಕಾಶ್ಮೀರದ ಸಾಂಬಾ ಮತ್ತು ಜಮ್ಮುವಿನ ವಿವಿಧ ಸ್ಥಳಗಳಲ್ಲಿ ನಾಲ್ಕು ಶಂಕಿತ ಡ್ರೋನ್ಗಳನ್ನು ಪತ್ತೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಈ ಪ್ರದೇಶಗಳಲ್ಲಿ ಭದ್ರತಾ ಪಡೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.