ಜಮ್ಮು-ಕಾಶ್ಮೀರದ ಪುಲ್ವಾಮಾದ ಸ್ಪೆಷಲ್ ಕರೆಕ್ಷನಲ್ ಹೋಂ, ಜಿಲ್ಲಾ ಕಾರಾಗೃಹ ಮತ್ತು ಕುಪ್ವಾರಾ ಮತ್ತು ಕಾರ್ಗಿಲ್ ಜಿಲ್ಲಾ ಕಾರಾಗೃಹಗಳಲ್ಲಿ ದಕ್ಷ ಕಾರ್ಯನಿರ್ವಹಣೆಗಾಗಿ 105 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ.
ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿದೆ. ಇದಕ್ಕೆ ಭಾರತೀಯ ಸೇನೆ ತೀಕ್ಷ್ಣವಾಗಿಯೇ ಪ್ರತ್ಯುತ್ತರ ನೀಡಲು ಸದಾ ಸಿದ್ಧವಿದ್ದು, ಅಗತ್ಯವಿದ್ದಾಗೆಲ್ಲಾ ಕ್ರಮ ಕೈಗೊಂಡಿದೆ ಎಂದು ಜನರಲ್ ವಿ.ಕೆಸಿಂಗ್ ಹೇಳಿದ್ದಾರೆ.
ಹಿಂದಿನ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ಬಳಿಕ ಕಾಶ್ಮೀರ ಕಣಿವೆಯಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸುವ ಭಾರತದ ಬದ್ಧತೆಯನ್ನು ಡಿಜಿಪಿ ದಿಲ್ಬಾಗ್ ಸಿಂಗ್ ಪುನರುಚ್ಚರಿಸಿದ್ದಾರೆ.
ಮೋದಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ನಿರ್ವಾತವನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡುತ್ತಿದ್ದು, ಫಾರೂಕ್ ಅಬ್ದುಲ್ಲಾ ಅವರಂತಹ ರಾಷ್ಟ್ರೀಯವಾದಿ ನಾಯಕರನ್ನು ಬಂಧಿಸುವ ಮೂಲಕ ಅವರಂತಹ ನಾಯಕರನ್ನು ಮುಗಿಸಲು ಪ್ರಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಸದ್ಯ ಜಮ್ಮು ಮತ್ತು ಕಾಶ್ಮೀರದ 22 ಜಿಲ್ಲೆಗಳ ಪೈಕಿ 12 ಜಿಲ್ಲೆಗಳಲ್ಲಿ ಪರಿಸ್ಥಿತಿ ಸಂಪೂರ್ಣವಾಗಿ ಸಾಮಾನ್ಯವಾಗಿದ್ದು, ಪೂಂಚ್ ಮತ್ತು ರಾಜೌರಿ ಜಿಲ್ಲೆಯಲ್ಲಿ ಲ್ಯಾಂಡ್ ಲೈನ್ ಫೋನ್ಗಳು ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ.
ಪಾಕಿಸ್ತಾನವು ಜೋಧ್ಪುರ-ಕರಾಚಿಯನ್ನು ಸಂಪರ್ಕಿಸುವ ಥಾರ್ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಸ್ಥಗಿತಗೊಳಿಸಿದ ಬೆನ್ನಲ್ಲೇ ಭಾರತ ಜೋಧ್ಪುರ-ಮುನಾಬಾವೊ ಸಂಪರ್ಕಿಸುವ ಥಾರ್ ಲಿಂಕ್ ಎಕ್ಸ್ಪ್ರೆಸ್ ಅನ್ನು ರದ್ದುಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.