ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ.
2022ರ ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ರಾಜ್ಯದ ಆರ್ಥಿಕ ಚಿತ್ರಣವನ್ನೇ ಬದಲಿಸುವ ಶಕ್ತಿ ಹೊಂದಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ₹2465.94 ಹೂಡಿಕೆಯ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಶನಿವಾರ ಸಂಜೆ ಕರ್ನಾಟಕ ಉದ್ಯೋಗ ಮಿತ್ರ ಭವನದಲ್ಲಿ ನಡೆದ 131 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸಂಘಟಿತ ವಲಯದಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಜತೆಗೆ ಸಾಫ್ಟ್ ವೇರ್ ವಲಯವೊಂದರಲ್ಲೇ ವರ್ಷಕ್ಕೆ 5 ಲಕ್ಷದಂತೆ ಒಟ್ಟು 25 ಲಕ್ಷ ಉದ್ಯೋಗ ಅವಕಾಶ ಲಭ್ಯವಾಗಲಿದೆ. ಈ ಮೂಲಕ ಒಟ್ಟಾರೆ 55 ಲಕ್ಷ ಉದ್ಯೋಗಗಳು ಯುವಜನರಿಗೆ ಸಿಗಲಿವೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
Nirmala Sitharaman On Budget 2022: ಬಜೆಟ್ ಮಂಡನೆಯ ಬಳಿಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದರೆ. ಈ ಸಂದರ್ಭದಲ್ಲಿ ಅವರು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
Retirement Age: 2050 ರ ಹೊತ್ತಿಗೆ, ದೇಶದ ಹಿರಿಯ ಜನಸಂಖ್ಯೆಯು ಪ್ರಸ್ತುತ ಸಮಯಕ್ಕಿಂತ ದ್ವಿಗುಣಗೊಳ್ಳುತ್ತದೆ, ನಂತರ ಪ್ರತಿ 5 ಜನರಲ್ಲಿ ಒಬ್ಬರು ಹಿರಿಯ ನಾಗರಿಕರಾಗಿರುತ್ತಾರೆ. ಸರ್ಕಾರವು ವಯಸ್ಸಾದವರ ಕೆಲಸದ ವಯಸ್ಸನ್ನು ಹೆಚ್ಚಿಸಿದರೆ, ಈಗಿರುವ ಕೆಲಸದ ಶಕ್ತಿಯ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ಈ ವರದಿಯಲ್ಲಿ ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.