ಈ ಖಾಲಿ ಹುದ್ದೆಗಳು ಮಹಿಳೆಯರಿಗೆ ಮಾತ್ರ. ಹಿರಿಯ ಪ್ರಧಾನ ಖಾಸಗಿ ಕಾರ್ಯದರ್ಶಿ, ಪ್ರಧಾನ ಖಾಸಗಿ ಕಾರ್ಯದರ್ಶಿ, ಸಹಾಯಕ ಸಾರ್ವಜನಿಕ ಸಂಪರ್ಕ ಅಧಿಕಾರಿ, ಸಹಾಯಕ ಕಾನೂನು ಅಧಿಕಾರಿ, ಜೂನಿಯರ್ ಹಿಂದಿ ಭಾಷಾಂತರಕಾರ ಮತ್ತು ಕೆಳ ವಿಭಾಗದ ಕ್ಲರ್ಕ್ ತಲಾ ಒಂದು ಹುದ್ದೆಯನ್ನು ಭರ್ತಿ ಮಾಡಲಾಗುತ್ತದೆ
ಎನ್.ಸಿ.ಸಿ. ಕ್ಲಿನಿಕ್ ವೈದ್ಯಾಧಿಕಾರಿಗಳ ಹುದ್ದೆ ಖಾಲಿ ಇದ್ದಲ್ಲಿ ಪ್ರತೀ ತಿಂಗಳ 3ನೇ ಸೋಮವಾರದಂದು ವೈದ್ಯರ ಮತ್ತು ತಜ್ಞ ವೈದ್ಯರ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕೆಲಸದ ವೇಳೆಯಲ್ಲಿ ಕಚೇರಿಯನ್ನು ಸಂಪರ್ಕಿಸುವುದು.
NIT Karnataka Recruitment 2024: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ ಬಿ.ಟೆಕ್, ಗಿಯೋಟೆಕ್ನಿಕಲ್ ಎಂಜಿನಿಯರಿಂಗ್ ಅಥವಾ ಸ್ಟ್ರಕ್ಚರಲ್ ಎಂಜಿನಿಯರಿಂಗ್ ಅಥವಾ ಓಷನ್ ಎಂಜಿನಿಯರಿಂಗ್ ಅಥವಾ ಮೆರೈನ್ ಸ್ಟ್ರಕ್ಚರ್ಸ್ನಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.
Job fest 2023: ಈ ಉದ್ಯೋಗ ಮೇಳದಲ್ಲಿ ಮಡಿಕೇರಿಯ ಕಲ್ಯಾಣಿ ಮೋಟರ್ಸ್, ಮೈಸೂರಿನ ಮಾಂಡವಿ ಮೋಟರ್ಸ್, ಅಟೋ ಲೈವ್, ಕೂಡಿಗೆಯ SLN ಕಾಫಿ, ಮಡಿಕೇರಿಯ ಸಮರ್ಥ ನಿಧಿ ಲಿಮಿಟೆಡ್ ಸೇರಿದಂತೆ ವಿವಿಧ ಕಂಪನಿಗಳು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ.
ಇಲ್ಲಿನ ನಗರಸಭೆ ವತಿಯಿಂದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್)ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂರು ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಸ್ವ ಸಹಾಯ ಸಂಘಗಳ/ ಒಕ್ಕೂಟದ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಮಾತೃವಂದನ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ವಿಶ್ವವಿದ್ಯಾಲಯದ ವಿಸ್ತರಣೆ ಹಾಗೂ ಸಂವಹನಾ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು, ಪದವೀಧರ ಸಹಾಯಕ ತಾತ್ಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ನೇಮಕಾತಿಗೆ ಜುಲೈ 21 ರಂದು ಬೆಳಿಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ.
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರಿನ ನಿಮಾನ್ಸ್ ಸಂಸ್ಥೆ ಸಹಯೋಗದೊಂದಿಗೆ ಯುವ ಸ್ಪಂದನ ಕೆಂದ್ರದಲ್ಲಿ ಆರಂಭಿಸಲಾದ “ಯುವ ಪರಿವರ್ತಕರಾಗಿ” ಕಾರ್ಯನಿರ್ವಹಿಸಲು ಅರ್ಹ ಸ್ಥಳೀಯ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಲಬುರಗಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಅಡಿಯಲ್ಲಿ ಖಾಲಿ ಇರುವ ಯುವಪರಿವರ್ತಕರ ಹುದ್ದೆಗೆ ಗೌರವಧನ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ಕಾನೂನು ಪದವೀಧರರಿಗೆ ಮಾಸಿಕ ಶಿಷ್ಯವೇತನದ ಆಧಾರದ ಮೇಲೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ಪಡೆಯುವ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಲಯದಡಿ ಕೆನರಾ ಬ್ಯಾಂಕ್ನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿ.ಪಿ.ಎಲ್ ಕುಟುಂಬದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಕೇಂದ್ರದಲ್ಲಿ, ಗ್ರಂಥಾಲಯ ವಿಜ್ಞಾನದ 4 ತಿಂಗಳ ಸರ್ಟಿಫೀಕೇಟ್ ಇನ್ ಲೈಬ್ರರಿ ಸೈನ್ಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉಚಿತವಾಗಿ ಲಘು (ಕಾರು/ಜೀಪ್) ಹಾಗೂ ಭಾರಿ ವಾಹನ (ಬಸ್ಸು) ಚಾಲನಾ ತರಬೇತಿ ಜೊತೆಗೆ ವಾಹನ ಚಾಲನಾ ಪರವಾನಿಗೆ ನೀಡುವ ಕಾರ್ಯಕ್ರಮವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿಗಾಗಿ ಐದು ಮಹಿಳಾ ಹಾಗೂ ಹತ್ತು ಜನ ಪುರುಷ ಅಭ್ಯರ್ಥಿಗಳು ಸೇರಿ ಒಟ್ಟು 15 ಅಭ್ಯರ್ಥಿಗಳಿಗೆ ಮೇ 2,2022 ರಿಂದ ಫೆಬ್ರುವರಿ 28,2023 ರವರೆಗೆ ಒಟ್ಟು 10 ತಿಂಗಳುಗಳ ಅವಧಿಗೆ ಗದಗದಲ್ಲಿರುವ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶ್ರೂಶುಷಕರ 20 ಹುದ್ದೆ, ಫಾರ್ಮಸಿಸ್ಟ್-15 ಹುದ್ದೆ, ಪ್ರಯೋಗಶಾಲಾ ತಂತ್ರಜ್ಞರ 14 ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಿಕೊಳ್ಳಲು ನೇರ ಸಂದರ್ಶನಕ್ಕೆ ಆಗಸ್ಟ್ 03 ರಂದು ಆಹ್ವಾನಿಸಲಾಗಿದೆ.
ಕೋವಿಡ್ 19 ಪ್ರಯುಕ್ತ ಧಾರವಾಡ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಹಿರಿಯ ಪುರುಷ ಆರೋಗ್ಯ ಸಹಾಯಕರು , ವಾಹನ ಚಾಲಕ ಹಾಗೂ ಗ್ರೂಪ್ 'ಡಿ' ಹುದ್ದೆಗಳನ್ನು 3 ತಿಂಗಳು ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಸೋಮವಾರ ಜುಲೈ 20 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ , ಕೆ.ಸಿ ಪಾರ್ಕ ಹತ್ತಿರ , ಧಾರವಾಡ ದಲ್ಲಿ (ವಾಕ್ ಇನ್ ಇಂಟರ್ವ್ಯೂ) ನೇರ ಸಂದರ್ಶನ ನಡೆಯಲಿದೆ .
By accepting cookies, you agree to the storing of cookies on your device to enhance site navigation, analyze site usage, and assist in our marketing efforts.