ಮಾಜಿ ಸಚಿವ ಈಶ್ವರಪ್ಪ ಮಾತಾನಾಡಿ, ಪಕ್ಷದ ಮೇಲೆ ಸಿಎಂ ಬೊಮ್ಮಾಯಿ ಮೇಲೆ ಸಂಪೂರ್ಣ ವಿಶ್ವಾಸವಿದೆ. ನಿನ್ನೆ ರಾತ್ರಿ ನಾನು ರಮೇಶ್ ಜಾರಕಿಹೊಳಿ ಸಿಎಂ ಬೊಮ್ಮಾಯಿ ಅವರನ್ನ ಭೇಟಿಯಾಗಿ ಮಾತಾಡಿದ್ದೇವೆ. ಅವರು ಹೇಳಿದ್ದಾರೆ ಈ ವಿಚಾರವನ್ನ ವರಿಷ್ಠರಿಗೆ ತಿಳಿಸಿದ್ದೇನೆ ಎಂದು. ಇನ್ನೊಂದು ಬಾರಿ ದೆಹಲಿ ಹೋಗಿ ನಿಮಗೆ ತಿಳಿಸ್ತೀನಿ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಅಂತಾ ಸಿಎಂ ಭೇಟಿ ಬಗ್ಗೆ ವಿವರಿಸಿದರು.
ಇಂದು ಉಭಯ ಸದನಗಳಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ವಿರೋಧಿಸಿ ವಿಪಕ್ಷ ಕಾಂಗ್ರೆಸ್ ಪ್ರತಿಭಟನೆ ನಡೆಸಿ, ಇವರನ್ನ ಮಂತ್ರಿಮಂಡಲದಿಂದ ವಜಾಗೊಳಿಸಿ ಮತ್ತು ದೇಶದ್ರೋಹ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದೆ.
ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಪಾಲ್ಗೊಳ್ಳಲು ಆಗಮಿಸಿದ್ದ ಕೆ.ಎಸ್ ಈಶ್ವರಪ್ಪ ಪತ್ರಕರ್ತರೊಂದಿಗೆ ಮಾತನಾಡುತ್ತಾ ಎರಡು ದಿನ ಕಾದು ನೋಡಿ,ಡಿಕೆ ಶಿವಕುಮಾರ್ ಅರೆಸ್ಟ್ ಆಗಬಹುದು ಸರ್ಕಾರವೇ ಬಿದ್ದು ಹೋಗಬಹುದು ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.