ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ಮುನ್ನವೇ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದ ಮಾಜಿ ಸಚಿವ ಡಾ. ಕೆ. ಸುಧಾಕರ್,
ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಗೆದ್ದ ಶಾಸಕರ ಹಾಗೂ ಸೋತ ಅಭ್ಯರ್ಥಿಗಳ ಸಭೆ ನಡೆದಿದ್ದು, ಸೋತ ಅಭ್ಯರ್ಥಿಗಳ ಸಭೆಯಲ್ಲಿ ಮಾಜಿ ಸಚಿವ ಎಂ ಟಿ ಬಿ ನಾಗರಾಜ್ ಮಾಜಿ ಸಚಿವ ಸುಧಾಕರ್ ಹಾಗೂ ಪಕ್ಷದ ವಿರುದ್ಧ ಕೆಂಡ ಕಾರಿದ್ದಾರೆ.
ಸಿದ್ದರಾಮಯ್ಯಗೆ ಮುಳುವಾಗುತ್ತಾ ಸುಧಾಕರ್ ಬಾಂಬ್..? ಸಮ್ಮಿಶ್ರ ಸರ್ಕಾರ ಬೀಳಲು ಸಿದ್ದು ಕುಮ್ಮಕ್ಕು ಎಂದು ಟ್ವೀಟ್. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಚಿವ ಡಾ. ಕೆ.ಸುಧಾಕರ್. ಈ ಟ್ವೀಟ್ ಸಿದ್ದರಾಮಯ್ಯ ಸಿಎಂ ಆಸೆಗೆ ತಣ್ಣೀರು ಎರಚುತ್ತಾ? ಸುಧಾಕರ್ ಟ್ವೀಟ್ ಕನಕಪುರ ಬಂಡೆಗೆ ವರದಾನ ಆಗುತ್ತಾ..?
ಮತದಾನದ ದಿನಾಂಕ ದಿನದಿಂದ ದಿನಕ್ಕೆ ಹತ್ತಿರವಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ಪ್ರಮುಖ ಪಕ್ಷಗಳು ಭರ್ಜರಿ ಪ್ರಚಾರ ಕಾರ್ಯ ಕೈಗೊಂಡಿವೆ. ಇದೀಗ ಗಡಿ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಡಾ. ಕೆ ಸುಧಾಕರ್ ಅವರ ಪರ ತೆಲುಗು ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಅವರು ಭರ್ಜರಿ ಪ್ರಚಾರ ನಡೆಸಿದರು.
BMTC bus service: ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ವ್ಯವಸ್ಥೆ ಮಾಡಿರುವುದು ಸ್ವಾಗತಾರ್ಹ. ಇದು ವಿದ್ಯಾರ್ಥಿಗಳಿಗೆ, ರೈತರಿಗೆ, ಉದ್ಯೋಗಿಗಳಿಗೆ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಕೊರೋನಾ ವೈರಸ್ ಮತ್ತೆ ಉಲ್ಬಣಗೊಂಡಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರವು ಸಹ ಎಚ್ಚೆತ್ತುಕೊಂಡಿದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಆರೋಗ್ಯ ಇಲಾಖೆಯ ಸಭೆ ನಡೆಸಿದರು.
ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು. ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತರಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
60 ವರ್ಷದ ಮೇಲಿರುವವರು ಅತೀ ಬೇಗ ಮೂರನೇ ಡೋಸ್ ಪಡೆಯಬೇಕು. ಮಾಸ್ಕ್ ಕಡ್ಡಾಯ ಮಾಡಿಕೊಳ್ಳಿ. ಕೋವಿಡ್ ಅಂದರೆ ಭಯ ಹೋಗಿದೆ. ಶೀತ ಕೆಮ್ಮು, ಮೈಕೈನೋವು ಇರುತ್ತೇ ಒಂದು ವಾರದ ನಂತ್ರ ಹೋಗುತ್ತೆ ಅಂತ ಅಸಡೆ ಇದೆ. ಲಸಿಕೆ ಲಭ್ಯ ಇದ್ರೂ ತೆಗೆದುಕೊಳ್ಳದೇ ಇರುವುದು ಮಹಾ ಅಪರಾಧವಾಗುತ್ತದೆ ಎಂದು ಮನವಿ ಮಾಡಿದ್ದಾರೆ.
ಮಕ್ಕಳ ಆರೋಗ್ಯ ಕಾರ್ಯಕ್ರಮ ಅನುಷ್ಠಾನದಲ್ಲಿ ಯಾದಗಿರಿ, ಕೊಪ್ಪಳ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ನಿಗದಿತ ಗುರಿ ತಲುಪದಿರುವುದಕ್ಕೆ ಡಿಎಚ್ಒಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.