ಗಾಂಜಾ ದಂಧೆಕೋರರಿಂದ ಕಲಬುರಗಿ ಪೊಲೀಸರ ಮೇಲೆ ದಾಳಿ ನಡೆಸಲಾಗಿದೆ. ಕಮಲಾಪುರ ಠಾಣೆ ಸಿಪಿಐ ಶ್ರೀಮಂತ್ ಇಲ್ಲಾಳ್ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಕ್ಕಿ ಹರಿಯುವ ನದಿಯಲ್ಲಿ ಪುಣ್ಯಸ್ನಾನ ಮಾಡಲು ಹೋಗಿದ್ದ ಯುವಕ ನಾಪತ್ತೆಯಾಗಿರೋ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ನಡೆದಿದೆ. ಗೋಪಾಲ್ ರಾಠೋಡ್ (20) ಭೀಮಾ ನದಿಯಲ್ಲಿ ಕೊಚ್ಚಿಕೊಂಡು ಹೋದ ಯುವಕ ಎನ್ನಲಾಗಿದೆ.
ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಆರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ಹಳ್ಳ-ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮೋಟಿಮೋಕ ತಾಂಡಾದ ಹಳ್ಳದಲ್ಲಿ ಸಿಲುಕಿ ಜಾನುವಾರುಗಳು ಪರದಾಡುತ್ತಿವೆ. ಚಿಂಚೋಳಿ ತಾಲೂಕಿನ ಅನೇಕ ಗ್ರಾಮಗಳು ಸಂಪೂರ್ಣ ಜಲಾವೃತವಾಗಿವೆ.. ನಗರದಲ್ಲಿ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ
ಕಲಬುರಗಿ ಜಿಲ್ಲೆ ದೇವಲಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಹಣವನ್ನು ಅರ್ಚಕರೇ ಗುಳುಂ ಮಾಡಿದ್ದಾರೆ.. ದೇವಸ್ಥಾನ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ತಮ್ಮ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ.. ಈ ಮೂಲಕ ಸರ್ಕಾರ ಬೊಕ್ಕಸಕ್ಕೆ ಕೋಟಿ ಕೋಟಿ ವಂಚಿಸಿದ್ದಾರೆ. ನಷ್ಟದ ಹಣವನ್ನು ಇವರಿಂದಲೇ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ.. ಪ್ರಕರಣ ಸಂಬಂಧ ಐವರು ಅರ್ಚಕರ ವಿರುದ್ಧ FIR ದಾಖಲಾಗಿದೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿರುವ ಬಸವೇಶ್ವರ ಮೂರ್ತಿಗೆ ಯುವಕನೊಬ್ಬ ಅಪಮಾನ ಮಾಡಿದ್ದಾನೆ. ಅನ್ಯ ಧರ್ಮದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ಬಸವೇಶ್ವರ ಪ್ರತಿಮೆಯ ಮುಖಕ್ಕೆ ಬಟ್ಟೆ ಮುಚ್ಚಿದ್ದಾನೆ. ಈ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು, ಚಿತ್ತಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆಯಲ್ಲಿ 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ, ಸಧ್ಯ ಗಾಯಾಳುಗಳನ್ನ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದುರಂತದಲ್ಲಿ ಚಾಲಕ ಸೇರಿ ಎಂಟರಿಂದ ಒಂಬತ್ತು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.
ಇಡೀ ರಾಜ್ಯದಲ್ಲಿ ಅಲ್ಲೊಲ ಕಲ್ಲೊಲ ಸೃಷ್ಟಿಸಿರುವ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರೋ ಅಕ್ರಮ ಪ್ರಕರಣ, ದಿನದಿಂದ ದಿನಕ್ಕೆ ಆರೋಪಿಗಳಿಗೆ ಕಾನೂನು ಕುಣಿಕೆ ಬಿಗಿಯಾಗುತ್ತಿದೆ.. ಅಕ್ರಮದ ಕಿಂಗ್ಪಿನ್ ಆರ್ಡಿ ಪಾಟೀಲ್ ಬಂಧನದ ನಂತರ, ನಾನು ಕೇವಲ ಎರಡು ದಿನಗಳಲ್ಲಿ ಬೆಲ್ ಮೇಲೆ ಹೊರಬರುತ್ತೇನೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.