ಪ್ರಸಕ್ತ 2023 24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ ಮೂರು ದಿನದಲ್ಲಿ ಅಂದರೆ (ಜುಲೈ 26 ರಿಂದ 28 ವರೆಗೆ) ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದರಿಂದ ಬೆಳೆ ಹಾನಿಯಾಗಿರುವ ಸಾಧ್ಯತೆ ಇರುವ ಕಾರಣ ಬೆಳೆ ವಿಮೆ ಮಾಡಿಸಿದ ರೈತರು ದೂರು ದಾಖಲಿಸಲು ಯೂನಿವರ್ಸಲ್ ಸೊಂಪೂ ಜನರಲ್ ಇನ್ಶುರೆನ್ಸ್ ಕಂಪನಿಯ ಟೋಲ್ ಫ್ರೀ ಸಂ.1800-200-5142 ಗೆ ಸಂಪರ್ಕಿಸಿದಾಗ ತಾಂತ್ರಿಕ ತೊಂದರೆ ಕಂಡು ಬರುತ್ತಿರುವದರಿಂದ ರೈತರು ಕೃಷಿ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇದೇ ಜುಲೈ 31 ರೊಳಗೆ ಲಿಖಿತ ದೂರು ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ.
ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ವ್ಯಾಪಾರ ನಿಯಂತ್ರಣ) ನಿಯಮ-೨೦೧೯ರಡಿ ನಗರ ಸ್ಥಳೀಯ ಸಂಸ್ಥೆಯ ಮಟ್ಟದಲ್ಲಿ ಬೀದಿ ವ್ಯಾಪಾರಿಗಳ ವ್ಯಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕುಂದುಕೊರತೆ ನಿವಾರಣಾ ಸಮಿತಿ ರಚಿಸಬೇಕಾಗಿದೆ. ಇದಕ್ಕಾಗಿ ಅರ್ಹ ಹಾಗೂ ಆಸಕ್ತಿಯುಳ್ಳ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿನ ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ಪ್ರದೇಶ ಹೆಚ್ಚಿಸಲು ಪ್ರತಿ ತಾಲೂಕಿಗೊಂದು ಟ್ರೀ ಪಾರ್ಕ್ (ಮರಗಳ ಉದ್ಯಾನವನ) ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಕಲಬುರಗಿ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸುನೀಲ ಪನ್ವಾರ ಅವರಿಗೆ ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಅವರು ಸೂಚಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.