Karnataka Assembly Elections 2023: ಕರ್ನಾಟಕ ವಿಧಾನಸಭೆ ಚುನಾವಣೆ 2023 ರ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಕುರಿತು ಕಾಂಗ್ರೆಸ್ ನೀಡಿದ ಭರವಸೆಯ ತಂತರ, ಬಿಜೆಪಿ ಈ ಭರವಸೆಯನ್ನು ಭಜರಂಗಬಲಿ ಭಗವಂತನೊಂದಿಗೆ ಸಂಯೋಜಿಸುವ ಮೂಲಕ ದೊಡ್ಡ ಪ್ರಚಾರವನ್ನೆ ಗಿಟ್ಟಿಸಿಕೊಂಡಿತು. ಪ್ರಧಾನಿ ಮೋದಿ ಕೂಡ ತಮ್ಮ ರ್ಯಾಲಿಗಳಲ್ಲಿ ಬಜರಂಗಬಲಿಯ ಬಗ್ಗೆ ಹಲವು ಹಲವು ಬಾರಿ ಪ್ರಸ್ತಾಪಿಸಿದ್ದಾರೆ.
ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಕಮಲ್ ನಾಥ್ ಗುರುವಾರದಂದು ರಾಜೀನಾಮೆ ನೀಡಿದ್ದಾರೆ.ಈಗ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಪಕ್ಷವು ಅಂಗೀಕರಿಸಿದೆ.ಈಗ ಅವರ ರಾಜೀನಾಮೆ ನಂತರ ಡಾ.ಗೋವಿಂದ್ ಸಿಂಗ್ ಅವರು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಮಾರ್ಚ್ ನಲ್ಲಿ ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಹೇಳಿದ್ದಾರೆ.
ಚುನಾವಣಾ ಆಯೋಗವು ಬುಧವಾರ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿ ಅವರ ಕುರಿತ ಐಟಂ ಹೇಳಿಕೆಗೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರಿಗೆ ನೋಟಿಸ್ ನೀಡಿದೆ.
ತನ್ನ ಬೆಂಬಲಿಗ ಶಾಸಕರೊಂದಿಗೆ ಮಧ್ಯ ಪ್ರದೇಶದ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ರಾಜ್ಯದ ಮಾಜಿ ಮುಖ್ಯಮಂತ್ರಿ ಶಿರ್ವರಾಜ್ ಸಿಂಗ್ ಚೌಹಾನ್, ಕಮಲನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಹೀಗಾಗಿ ರಾಜ್ಯಪಾಲರ ಆದೇಶವನ್ನು ಪಾಲಿಸದೇ 'ರಣಛೋಡದಾಸ್' ಆಗಿದೆ ಎಂದಿದ್ದಾರೆ.
ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರಿದಾಗಿನಿಂದ ಕಾಂಗ್ರೆಸ್ ಶಾಸಕರು ಸಹ ಈಗ ಬಿಜೆಪಿ ಮುಖ ಮಾಡಿರುವ ಬೆನ್ನಲ್ಲೇ ತಮ್ಮ ಶಾಸಕರನ್ನು ಹಿಂತಿರುಗಿಸಬೇಕೆಂದು ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಕೇಂದ್ರ ಗೃಹ ಸಚಿವ ಅಮಿತ್ ಷಾ ಗೆ ಪತ್ರ ಬರೆದಿದ್ದಾರೆ.
ಮಂಗಳವಾರ ಸಂಜೆ ನಡೆದ ಸಭೆಯಲ್ಲಿ ಇಬ್ಬರು ರಾಜ್ಯ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಬೆಳಕಿಗೆ ಬಂದ ನಂತರ ಬಿಜೆಪಿಗೆ ನಾಟಕೀಯ ತಿರುವು ನೀಡಿದೆ.ಜ್ಯೋತಿರಾದಿತ್ಯ ಸಿಂಧಿಯಾ ಈಗ ಬಿಜೆಪಿಗೆ ಸೇರುತ್ತಿರುವುದರಿಂದಾಗಿ ಅಧಿಕಾರದ ಹಂಬಲದಲ್ಲಿರುವ ಬಿಜೆಪಿ ನಾಯಕರ ನಡುವೆ ತಿಕ್ಕಾಟ ಆರಂಭವಾಗಿದೆ.
ಸುಮಾರು 4 ರಿಂದ 5 ಗಂಟೆಗಳ ಕಾಲ ಭೋಪಾಲ್ನಲ್ಲಿ ನಡೆದ ಸಭೆಯ ನಂತರ ಸಚಿವ ಜೀತು ಪಟ್ವಾರಿ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಗುರಿಯಾಗಿಸಿಕೊಂಡು ಅವರನ್ನು ಪ್ರಜಾಪ್ರಭುತ್ವದ ಕೊಲೆಗಾರ ಎಂದು ಕರೆದರು.
ಬುಡಕಟ್ಟು ಜನಾಂಗವನ್ನು "ನಿಜವಾದ ಮಾಸ್ಟರ್ಸ್" ಎಂದು ಕರೆದ ಎನ್ಸಿಪಿ ಮುಖ್ಯಸ್ಥರು ಹುತಾತ್ಮರಾದ ಬುಡಕಟ್ಟು ಸ್ವಾತಂತ್ರ್ಯ ಹೋರಾಟದ ತಾಂಟಿಯಾ ಭಿಲ್ ಅವರಿಗೆ 175 ನೇ ಜನ್ಮ ವಾರ್ಷಿಕೋತ್ಸವದಂದು ಗೌರವ ಸಲ್ಲಿಸುವ ಸಂದರ್ಭದಲ್ಲಿ ಅವರು ದೇಶವನ್ನು ಸರಿಯಾದ ಹಾದಿಗೆ ಕೊಂಡೊಯ್ಯುವ ಶಕ್ತಿ ಹೊಂದಿದ್ದಾರೆ ಎಂದು ಹೇಳಿದರು.
ಈ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸುಧಾರಿಸಲು ಸೋನಿಯಾ ಗಾಂಧಿ ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಇಂದು ಸಂಜೆ, ತಮ್ಮ ನಿವಾಸ 10 ಜನಪಥದಲ್ಲಿ ಕಾಂಗ್ರೆಸ್ ಆಡಳಿತವುಳ್ಳ ರಾಜ್ಯಗಳ ಮುಖ್ಯಮಂತ್ರಿಗಳ ಪ್ರಮುಖ ಸಭೆ ಕರೆಯಲಾಗಿದೆ.
1984 ರಲ್ಲಿ ದೆಹಲಿಯಲ್ಲಿ ನಡೆದ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ಹೆಸರಿಸುವ ಪ್ರಕರಣವನ್ನು ಶೀಘ್ರದಲ್ಲೇ ಪುನಃ ತೆರೆಯಬಹುದು, ಇದಕ್ಕೆ ಪೂರಕವಾಗಿ ಈಗಾಗಲೇ ಅಮಿತ್ ಶಾ ಅವರ ಗೃಹ ಸಚಿವಾಲಯ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿರುವುದು ಈ ಬೆಳವಣಿಗೆಗಳಿಗೆ ಪುಷ್ಟಿ ನೀಡಿದೆ.
ಯಾವುದೇ ನಾಯಕ ಅಥವಾ ಸರ್ಕಾರದೊಂದಿಗೆ ಯಾರಿಗಾದರೂ ಸಮಸ್ಯೆ ಇದ್ದರೆ ಅದನ್ನು ಅವರು ಪಕ್ಷದೊಳಗಿನ ಸೂಕ್ತ ವೇದಿಕೆಗೆ ಕೊಂಡೊಯ್ಯಬೇಕು, ಅವರ ಸಮಸ್ಯೆಗಳಿಗೆ ಖಂಡಿತವಾಗಿಯೂ ಪರಿಹಾರ ಸಿಗುತ್ತದೆ ಎಂದು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು.
ಇತರ ಹಿಂದುಳಿದ ವರ್ಗಗಳಿಗೆ ರಾಜ್ಯದಲ್ಲಿ 27 ಶೇ ಮೀಸಲಾತಿ ನೀಡುವ ಪ್ರಸ್ತಾವನೆಯನ್ನು ಸರ್ಕಾರ ಅಂಗೀಕರಿಸಿದೆ. ಒಬಿಸಿ ಮೀಸಲಾತಿಯ ಬಗ್ಗೆ ಮಾನ್ಸೂನ್ ಅಧಿವೇಶನದಲ್ಲಿ ಚರ್ಚಿಸಲಾಗುವುದು. ಮುಖ್ಯಮಂತ್ರಿ ಕಮಲ್ ನಾಥ್ ಅವರು ಚುನಾವಣೆಗೆ ಮುಂಚಿತವಾಗಿ ಒಬಿಸಿ ಮೀಸಲಾತಿ ಹೆಚ್ಚಳದ ಭರವಸೆ ನೀಡಿದ್ದರು.
ಭಾರಿ ಮಳೆಯಿಂದಾಗಿ ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಗುಡುಗು ಸಿಡಿಲಿನಿಂದಾಗಿ ಮೃತಪಟ್ಟಿದ್ದಾರೆ. ಆದರೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಕೇವಲ ಗುಜರಾತಿನಲ್ಲಿ ಮೃತಪಟ್ಟಿರುವವರಿಗಾಗಿ ಸಂತಾಪ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಅತಿ ಕಠಿಣ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಹಾಕಿದ್ದ ಸವಾಲನ್ನು ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಸ್ವೀಕರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.