ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ನ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ (ಆರ್ಡಿಎಎಂ) ಶಾಸಕ ಜಿಗ್ನೇಶ್ ಮೇವಾನಿ ಅವರು ಸೆಪ್ಟೆಂಬರ್ 28 ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜೆಎನ್ ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಅವರು ಕಾಂಗ್ರೆಸ್ ಪಕ್ಷ ಸೇರಲು ಮಾತುಕತೆ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ಎಎನ್ ಐಗೆ ತಿಳಿಸಿವೆ.
ದೆಹಲಿಯ ಆಡಳಿತಾರೂಢ ಕೇಜ್ರಿವಾಲ್ ನೇತೃತ್ವದ ಸರ್ಕಾರವು ದೀರ್ಘಕಾಲದವರೆಗೆ ಬಾಕಿ ಇರುವ ದೇಶದ್ರೋಹ ಪ್ರಕರಣದಲ್ಲಿ ವಿಚಾರಣೆಗೆ ಅನುಮತಿ ನೀಡಿದ ಕೆಲವೇ ಗಂಟೆಗಳ ನಂತರ ಪ್ರತಿಕ್ರಿಯಿಸಿರುವ ಕನ್ನಯ್ಯ ಕುಮಾರ್ ದೆಹಲಿ ಸರ್ಕಾರಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ.
ಮಾಜಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ 2016 ರ ಫೆಬ್ರವರಿಯಲ್ಲಿ ನಡೆದ ಕ್ಯಾಂಪಸ್ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗಿದ ಮೆರವಣಿಗೆಯನ್ನು ಮುನ್ನಡೆಸಿದರು ಎಂದು ಆರೋಪಿಸಿ ಕನ್ಹಯ್ಯ ಕುಮಾರ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ ಸರ್ಕಾರ ಅನುಮತಿ ನೀಡಿದೆ.
ಮಾಜಿ ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್ ಅವರ ಬೆಂಗಾವಲು ಮೇಲೆ ಬಿಹಾರದಲ್ಲಿ ಸಾರ್ವಜನಿಕ ಸಭೆಯ ನಂತರ ಹಿಂದಿರುಗುತ್ತಿದ್ದಾಗ ಹಲ್ಲೆ ನಡೆಸಲಾಗಿದೆ.ಈಗ ಸಿಪಿಐನ ಭಾಗವಾಗಿರುವ 33 ವರ್ಷದ ಕನ್ನಯ್ಯಕುಮಾರ್ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಇತರ ಸಿಎಎ ವಿರೋಧಿ ಪ್ರತಿಭಟನಾಕಾರರೊಂದಿಗೆ ಮಾತನಾಡುತ್ತಿದ್ದರು.
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ದೇಶದ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಒಡಕು ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯತ್ನಿಸುತ್ತಿದ್ದಾರೆ ಎಂದು ಭಾರತದ ಕಮ್ಯುನಿಸ್ಟ್ ಪಕ್ಷದ ಮುಖಂಡ ಕನ್ಹಯ್ಯ ಕುಮಾರ್ ಆರೋಪಿಸಿದ್ದಾರೆ.
ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (ಜೆಎನ್ಯುಎಸ್ಯು) ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಗುರುವಾರ, ಜೆಎನ್ಯು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ನಡೆದ ಕ್ರೂರ ದಾಳಿಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ತಾವು ದೇಶವನ್ನು ಒಡೆಯುತ್ತಿಲ್ಲ ಆದರೆ ಬಿಜೆಪಿಯನ್ನು ಒಡೆಯುವುದಾಗಿ ಹೇಳಿದರು.
ಇದೇ ಮೊದಲ ಬಾರಿಗೆ ವಿದ್ಯಾರ್ಥಿ ಚಳುವಳಿಯಿಂದ ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸಿರುವ ಕನ್ನಯ್ಯ ಕುಮಾರ್ ಬೇಗುಸರಾಯೈಗೆ ಕೆಟ್ಟ ಹೆಸರು ತರಲು ಯತ್ನಿಸುತ್ತಿರುವ ಶಕ್ತಿಗಳು ಸೋಲಲಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಬಿಹಾರದ ಬೆಗುಸಾರೈ ನಿಂದ ಎಡಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿದ್ಯಾರ್ಥಿ ನಾಯಕ ಕನ್ನಯ್ಯ ಕುಮಾರ್ ಈಗ ನಾಮಪತ್ರ ಸಲ್ಲಿಸುವ ವೇಳೆ ತಮ್ಮನ್ನು ನಿರುದ್ಯೋಗಿ ಎಂದು ಘೋಷಿಸಿಕೊಂಡಿದ್ದಾರೆ.
ವಿದ್ಯಾರ್ಥಿ ನಾಯಕ ಕನ್ನಯ್ಯ ಕುಮಾರ್ ಭಾನುವಾರದಂದು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಮಾತನಾಡುತ್ತಾ ಈ ವಿಚಾರವಾಗಿ ಪಕ್ಷ ಮತ್ತು ಮೈತ್ರಿಕೂಟ ನಿರ್ಧರಿಸಲಿದೆ ಎಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.