ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ, ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳಲ್ಲಿ ನಿರಂತರ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ, ಅಸಂಘಟಿತ ತಂಡಗಳು/ಏಕವ್ಯಕ್ತಿ ಕಲಾವಿದರಿಗೆ ವಾದ್ಯಪರಿಕರ/ವೇಷಭೂಷಣ ಖರೀದಿಗೆ ಹಾಗೂ ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ/ತಂಡ ಕಲಾವಿದರುಗಳಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯ ನೀಡಲಾಗುತ್ತಿದ್ದು, ಆರ್ಹ ಆಸಕ್ತರಿಂದ ಸೇವಾಸಿಂಧು ಮುಖಾಂತರ ಅರ್ಜಿ ಆಹ್ವಾನಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಾ.ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ವತಿಯಿಂದ 2021-22ನೇ ಸಾಲಿನ ರಾಷ್ಟ್ರೀಯ ಯುವ ಪ್ರಶಸ್ತಿಗೆ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 05 ಕೊನೆಯ ದಿನವಾಗಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಜೆಟ್ ನ್ನು ಸಿಎಂ ಕುಮಾರಸ್ವಾಮಿ ಮಂಡಿಸಿದ್ದು ಇದರಲ್ಲಿ ಈ ಬಾರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹಲವು ನೂತನ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.