ಕನ್ನಡ ಪುಸ್ತಕ ಲೋಕವು ಆಧುನಿಕ ಮಾಧ್ಯಮಗಳ ನೂತನ ಆವಿಷ್ಕಾರಗಳ ಫಲವಾಗಿ ವಿಸ್ತಾರಗೊಳ್ಳುತ್ತಿದೆ. ಹೀಗಾಗಿ, ಪುಸ್ತಕೋದ್ಯಮದ ಎಲ್ಲಾ ಸಾಧ್ಯತೆ ಮತ್ತು ಸವಾಲುಗಳನ್ನು ಹೊಸ ದೃಷ್ಠಿಕೋನದಿಂದ ನೋಡುವ ಅಗತ್ಯತೆ ಇದೆ. ಆದ್ದರಿಂದ ಕನ್ನಡ ಪುಸ್ತಕ ನೀತಿಯನ್ನು ಪುನರ್ ರಚಿಸಲು ನಿರ್ಧರಿಸಲಾಗಿದೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ 2020ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.