ರಾಜ ಪುನೀತೋತ್ಸವದಲ್ಲಿ ಸಾಧಕರಿಗೆ ಗೌರವ, ಹಿರಿಯ ನಟ ಶ್ರೀನಾಥ್ಗೆ ರಾಜ ರತ್ನ ಪ್ರಶಸ್ತಿ ಪ್ರಧಾನ. ವೈದ್ಯ ರವೀಂದ್ರನಾಥ್ಗೆ ಪುನೀತ್ ರತ್ನ ಪ್ರಶಸ್ತಿ. ನಿಂಪೋನಿ ಸ್ವರ ಪ್ರತಿಷ್ಠಾನ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮ.
Firefly: ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ಫೈರ್ ಫ್ಲೈ ಚಿತ್ರ ಇದೇ ತಿಂಗಳ 24ಕ್ಕೆ ತೆರೆಗೆ ಬರ್ತಿದೆ. ಸಿನಿಮಾ ಬಿಡುಗಡೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು,ಪ್ರಚಾರ ಬಿರುಸಿನಿಂದ ಸಾಗಿದೆ. ಅದರ ಭಾಗವಾಗಿ ಚಿತ್ರದ ಮತ್ತೊಂದು ಹಾಡನ್ನು ಬಿಡುಗಡೆ ಮಾಡಲಾಗಿದೆ. ಧ್ರುವ ಸರ್ಜಾ ಫೈರ್ ಫ್ಲೈ ಸಿನಿಮಾದ ಹುಷಾರು ಲೇ ಹುಷಾರು ಎಂಬ ಹಾಡನ್ನು ರಿಲೀಸ್ ಮಾಡಿ ಇಡೀ ತಂಡಕ್ಕೆ ಶುಭಾಶಯ ಕೋರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚಿಸದೆ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಒಂದು ರಸ್ತೆ ಕೂಡ ನಿರ್ಮಾಣವಾಗಿಲ್ಲ. ಪರಿಸ್ಥಿತಿ ಹೀಗಿರುವಾಗ ಜಾತಿ ಗಣತಿ ವರದಿ ಬಗ್ಗೆ ಸರ್ಕಾರ ಚಿಂತಿಸುತ್ತಿದೆ ಎಂದು ಆರ್. ಅಶೋಕ್ ಕಿಡಿಕಾರಿದರು.
ರಾಜ್ಯ ಸರ್ಕಾರ ಜಾತಿ ಗಣತಿಯನ್ನು ಸ್ವೀಕರಿಸಿ ಬಹಿರಂಗಪಡಿಸಬೇಕು ಎಂದು ಜಯ ಪ್ರಕಾಶ್ ಹೆಗ್ಡೆ ಜೀ ಕನ್ನಡ ನ್ಯೂಸ್ನೊಂದಿಗೆ ಒತ್ತಾಯಿಸಿದ್ದಾರೆ. ಜಾತಿ ಗಣತಿಯಲ್ಲಿ ಯಾವುದೇ ದೋಷವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದು, ಗಣತಿ ವರದಿಯನ್ನು ಓದಿದರೆ ಎಲ್ಲರೂ ಒಪ್ಪಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾದ ಚರ್ಚೆ ಮಾಡಿದ್ದೇವೆ. ಚರ್ಚೆ ಅಪೂರ್ಣವಾಗಿದ್ದು, ಕೆಲವು ಸಚಿವರು ತಾಂತ್ರಿಕ ಮಾಹಿತಿಯನ್ನು ಕೇಳಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ರಾಜ್ಯದಾದ್ಯಂತ ಹಮ್ಮಿಕೊಂಡಿದ್ದ ಲಾರಿ ಮಾಲೀಕರ ಮುಷ್ಕರಕ್ಕೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಪ್ರತಿಭಟನೆ ಅಂತಹ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲ.ಎಂದಿನಂತೆ ರಸ್ತೆಗೆ ಲಾರಿಗಳು ಇಳಿದಿದ್ದವು.
ಜಾತಿಗಣತಿಯಲ್ಲಿ ಹಲವರು ಜಾತಿ ಹೆಸರಿನಲ್ಲಿ ಗುರಿತಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನುವ ಸಂಗತಿ ಬಹಿರಂಗವಾಗಿದೆ.ಸುಮಾರು 1.34 ಲಕ್ಷ ಜನರು ಜಾತಿ ಹೆಸರಿನಲ್ಲಿ ಗುರುತಿಸಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಯುಟ್ಯೂಬ್ ನೋಡಿ ಸರ ಕಳ್ಳತನ ಮಾಡುತ್ತಿದ್ದ ನಿತಿನ್ ಮತ್ತು ಪ್ರಭು ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.ಇವರು 24 ಗಂಟೆ ಬಾಡಿಗೆ ಬೈಕ್ ಪಡೆದು ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ.
HUBBALLI Murder Case: ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ, ಬಾಲಕಿ ಹೊರಗಡೆ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ಆರೋಪಿ ರಿತೇಶ್ ಕುಮಾರ್ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದಿದ್ದ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.