ಕನ್ನಡ ಸಾಹಿತ್ಯ ಪರಿಷತ್ ಚಿಂತನಾ ಸಭೆಯಲ್ಲಿ ಕನ್ನಡ ಶಾಲೆಗಳನ್ನು ಉಳಿಸಲು ಎರಡು ಪ್ರಮುಖ ನಿರ್ಣಯಗಳನ್ನು ತೆಗೆದು ಕೊಳ್ಳಲಾಯಿತು.ಅದರಲ್ಲಿ ಕನ್ನಡ ಶಾಲೆಗಳನ್ನು ಉಳಿಸ ಬೇಕು, ಅವುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸ ಬೇಕು , ಅಗತ್ಯಕ್ಕೆ ತಕ್ಕಷ್ಟು ಶಿಕ್ಷಕರನ್ನು ನೇಮಕ ಮಾಡಬೇಕು ಎಂಬ ಅಗತ್ಯಗಳನ್ನು ಅನುಸರಿಸಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸಲ್ಲಿಸ ಬೇಕು ಎಂದು ಸಭೆ ನಿರ್ಣಯಿಸಿತು.
ಕನ್ನಡ ಸಾಹಿತ್ಯ ಪರಿಷತ್ತು ೨೦೧೮, ೨೦೧೯, ೨೦೨೦, ೨೦೨೧, ೨೦೨೨ ಹಾಗೂ ೨೦೨೩ ನೇ ಸಾಲಿನ ʻಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ*ʼ ಯನ್ನು ಪ್ರಕಟಿಸಲಾಗಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ೬ ವರ್ಷಗಳಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡದೇ ಇರುವುದರಿಂದ ಈ ಬಾರಿ ೬ ಜನ ಸಾಧಕರಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನೂ ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2021-22ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಕನ್ನಡ ಪ್ರವೇಶ, ಕಾವ್ಯ, ಜಾಣ, ರತ್ನ ಪರೀಕ್ಷೆಗಳನ್ನು ಕೋವಿಡ್-19ರ ಮಾರ್ಗಸೂಚಿಯಂತೆ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪ್ರಸಕ್ತ ಸಾಲಿನ ಸಾಹಿತ್ಯ ಪರೀಕ್ಷೆಗಳನ್ನು ಫೆಬ್ರವರಿ 18, 19 ಹಾಗೂ 20 ರಂದು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.